ಒಂದೆಡೆ ಮತ ಎಣಿಕೆ.. ಮತ್ತೊಂದೆಡೆ ಮಡದಿಗೆ ಕೊರೊನಾ: ಶಿರಾ ‘ಕೈ’ ಅಭ್ಯರ್ಥಿಗೆ ಡಬಲ್ ಟೆನ್ಷನ್
ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರರ ಪತ್ನಿಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಹೀಗಾಗಿ, ಜಯಚಂದ್ರ ಪತ್ನಿ ನಿರ್ಮಲಾ ಸದ್ಯ ಹೋಂ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ, ಪತ್ನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯಚಂದ್ರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ಕೊರೊನಾ ಟೆಸ್ಟ್ಗೆ ಗಂಟಲು ದ್ರವದ ಮಾದರಿ ಸಹ ಕೊಟ್ಟಿದ್ದಾರೆ. ಹಾಗಾಗಿ, ನಾಳೆ ಮತ ಎಣಿಕೆ ಕೇಂದ್ರಕ್ಕೆ ಟಿ.ಬಿ. ಜಯಚಂದ್ರ ಬಹುತೇಕ ಗೈರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರರ ಪತ್ನಿಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಹೀಗಾಗಿ, ಜಯಚಂದ್ರ ಪತ್ನಿ ನಿರ್ಮಲಾ ಸದ್ಯ ಹೋಂ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತ, ಪತ್ನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯಚಂದ್ರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ಕೊರೊನಾ ಟೆಸ್ಟ್ಗೆ ಗಂಟಲು ದ್ರವದ ಮಾದರಿ ಸಹ ಕೊಟ್ಟಿದ್ದಾರೆ. ಹಾಗಾಗಿ, ನಾಳೆ ಮತ ಎಣಿಕೆ ಕೇಂದ್ರಕ್ಕೆ ಟಿ.ಬಿ. ಜಯಚಂದ್ರ ಬಹುತೇಕ ಗೈರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.