ತಡರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ ವೃದ್ಧ ಮೇಲ್ಸೇತುವೆ ಮೇಲಿಂದ ಬಿದ್ದು ಸಾವು

ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದ ನಿವಾಸಿ ಲಕ್ಷ್ಮಣ ನಿನ್ನೆ ತಡರಾತ್ರಿ ಅಂಡರ್ ಪಾಸ್ ಬ್ರಿಡ್ಜ್ ಬಳಿ ತೆರಳಿದ್ದ ವೇಳೆ ಮೂತ್ರ ವಿಸರ್ಜನೆಗಾಗಿ ಹೋಗಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದರು. ಗಾಯಗೊಂಡಿದ್ದ ವೃದ್ಧನಿಗೆ ಕೊಲ್ಹಾರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ತಡರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ ವೃದ್ಧ ಮೇಲ್ಸೇತುವೆ ಮೇಲಿಂದ ಬಿದ್ದು ಸಾವು
ಮೃತ ವೃದ್ಧ ಲಕ್ಷ್ಮಣ ಚಲವಾದಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Mar 08, 2021 | 1:04 PM

ವಿಜಯಪುರ: ಅಂಡರ್ ಪಾಸ್ ಮೇಲ್ಸೇತುವೆ ಮೇಲಿಂದ ಬಿದ್ದು ಗಾಯಗೊಂಡಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣ ಬಳಿಯ NH 218 ರಲ್ಲಿನ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ. ನಿನ್ನೆ ತಡರಾತ್ರಿ ಸೇತುವೆ ಬಳಿ ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ಈ ಘಟನೆ ಸಂಭವಿಸಿದೆ. ಲಕ್ಷ್ಮಣ ಚಲವಾದಿ (69) ಮೃತ ವೃದ್ಧ.

ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದ ನಿವಾಸಿ ಲಕ್ಷ್ಮಣ ನಿನ್ನೆ ತಡರಾತ್ರಿ ಅಂಡರ್ ಪಾಸ್ ಬ್ರಿಡ್ಜ್ ಬಳಿ ತೆರಳಿದ್ದ ವೇಳೆ ಮೂತ್ರ ವಿಸರ್ಜನೆಗಾಗಿ ಹೋಗಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದರು. ಗಾಯಗೊಂಡಿದ್ದ ವೃದ್ಧನಿಗೆ ಕೊಲ್ಹಾರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆ ತರುವಾಗ ಮಾರ್ಗ ಮಧ್ಯೆ ವೃದ್ಧ ಮೃತಪಟ್ಟಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜಮೀನಿನಲ್ಲಿ ಕೆಲಸ ಮಾಡುವಾಗ ಜೇನು ಹಿಂಡು ದಾಳಿ, ಆಸ್ಪತ್ರೆಯಲ್ಲಿ ವೃದ್ಧ ಸಾವು