ಅಡಿಕೆ ಮಾರಾಟಗಾರರಿಂದ 26 ಲಕ್ಷ ರೂ. ದರೋಡೆ ಪ್ರಕರಣ: ಇನ್ಸ್ಪೆಕ್ಟರ್ ಅಮಾನತು
ಬೆಂಗಳೂರು: ಅಡಿಕೆ ಮಾರಾಟಗಾರರ ಬಳಿ 26 ಲಕ್ಷ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ SJ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಕುಮಾರ್ರನ್ನ ಸಸ್ಪೆಂಡ್ ಮಾಡಲಾಗಿದೆ. ಇನ್ಸ್ಪೆಕ್ಟರ್ ಯೋಗೇಶ್‌ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಡಿಕೆ ಮಾರಾಟಗಾರರ ಬಳಿ SJ ಪಾರ್ಕ್ ಠಾಣೆಯ SI ಜೀವನ್‌ಕುಮಾರ್ ಹಾಗೂ ಆತನ ಟೀಂ 26 ಲಕ್ಷ ರೂಪಾಯಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೇ ವೇಳೆ ಆತನಿಂದ […]
Follow us on
ಬೆಂಗಳೂರು: ಅಡಿಕೆ ಮಾರಾಟಗಾರರ ಬಳಿ 26 ಲಕ್ಷ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ SJ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ಕುಮಾರ್ರನ್ನ ಸಸ್ಪೆಂಡ್ ಮಾಡಲಾಗಿದೆ. ಇನ್ಸ್ಪೆಕ್ಟರ್ ಯೋಗೇಶ್‌ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಡಿಕೆ ಮಾರಾಟಗಾರರ ಬಳಿ SJ ಪಾರ್ಕ್ ಠಾಣೆಯ SI ಜೀವನ್‌ಕುಮಾರ್ ಹಾಗೂ ಆತನ ಟೀಂ 26 ಲಕ್ಷ ರೂಪಾಯಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೇ ವೇಳೆ ಆತನಿಂದ ಇನ್ಸ್ಪೆಕ್ಟರ್ ಯೋಗೇಶ್ ಕುಮಾರ್ 6 ಲಕ್ಷ ರೂಪಾಯಿ ಪಡೆದಿದ್ದರು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಬಯಲಿಗೆ ಬಂದಿತ್ತು. ಸಿಟಿ ಮಾರುಕಟ್ಟೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಪ್ರಾಥಮಿಕ ತನಿಖೆ ನಡೆಸಿದ್ದರು ಹಾಗೂ SI ಜೀವನ್ಕುಮಾರ್ನ ವಿಚಾರಣೆ ಸಹ ಮಾಡಿದ್ದರು.
ಸದ್ಯ ನಿರೀಕ್ಷಣಾ ಜಾಮೀನು ಪಡೆದಿರುವ ಯೋಗೇಶ್ ಕುಮಾರ್ ನಾಳೆ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಲಿರುವ ಮಾಹಿತಿ ಸಿಕ್ಕಿದೆ.