AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್​ಗೆ ಕೊರೊನಾ ಪಾಸಿಟಿವ್..

ವಿಜಯಪುರ:ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಈ ವಿಚಾರವನ್ನು ಸ್ವತಃ ಶಾಸಕರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕಳೆದ ಆಗಸ್ಟ್ 14ರಂದು ಆರೋಗ್ಯ ತಪಾಸಣೆ ಹಾಗೂ ಕೊರೊನಾ ಟೆಸ್ಟ್ ಮಾಡಿಸಿದ ಶಾಸಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಹೀಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರು, ನಮಗೆ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ, ಹಾಗಾಗಿ ಯಾರೂ ಸಹ ಆತಂಕಪಡುವ ಅಗತ್ಯವಿಲ್ಲವೆಂದು ಬರೆದುಕೊಂಡಿದ್ದಾರೆ. ಜೊತೆಗೆ ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ ಎಂದಿರುವ […]

ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್​ಗೆ ಕೊರೊನಾ ಪಾಸಿಟಿವ್..
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Aug 16, 2020 | 10:54 AM

ವಿಜಯಪುರ:ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಈ ವಿಚಾರವನ್ನು ಸ್ವತಃ ಶಾಸಕರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಆಗಸ್ಟ್ 14ರಂದು ಆರೋಗ್ಯ ತಪಾಸಣೆ ಹಾಗೂ ಕೊರೊನಾ ಟೆಸ್ಟ್ ಮಾಡಿಸಿದ ಶಾಸಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಹೀಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರು, ನಮಗೆ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ, ಹಾಗಾಗಿ ಯಾರೂ ಸಹ ಆತಂಕಪಡುವ ಅಗತ್ಯವಿಲ್ಲವೆಂದು ಬರೆದುಕೊಂಡಿದ್ದಾರೆ.

ಜೊತೆಗೆ ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ ಎಂದಿರುವ ಶಾಸಕರು, ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ, ಹಾಗೂ ಮನೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಇರಬೇಕೆಂದು ಮನವಿ ಮಾಡಿದ್ದಾರೆ.