ಆಷಾಢ ಮಾಸದ ಕೊನೆಯ ಶುಕ್ರವಾರ, ಬನಶಂಕರಿ ದೇವಿಗೆ ವಿಶೇಷ ಪೂಜೆ
ಬೆಂಗಳೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿದೆ. ಶಕ್ತಿದೇವತೆ ಬನಶಂಕರಿ ದೇವಿಗೆ ಸಿಂಧೂರ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಪ್ರತಿ ಬಾರಿ ಅಮ್ಮನ ದರ್ಶನಕ್ಕೆ ಸಾವಿರಾರು ಜನ ಬರ್ತಿದ್ರು. ಆದರೆ ಕೊರೊನಾ ಭೀತಿ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ಬನಶಂಕರಿ ದೇಗುಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗಿನ ಪೂಜೆ ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ.
ಬೆಂಗಳೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿದೆ. ಶಕ್ತಿದೇವತೆ ಬನಶಂಕರಿ ದೇವಿಗೆ ಸಿಂಧೂರ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಪ್ರತಿ ಬಾರಿ ಅಮ್ಮನ ದರ್ಶನಕ್ಕೆ ಸಾವಿರಾರು ಜನ ಬರ್ತಿದ್ರು. ಆದರೆ ಕೊರೊನಾ ಭೀತಿ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ಬನಶಂಕರಿ ದೇಗುಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗಿನ ಪೂಜೆ ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ.
Published On - 8:19 am, Fri, 17 July 20