ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ, ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ
ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ. ಬಸವನಗುಡಿ ದೊಡ್ಡ ಗಣೇಶ ದೇವಸ್ಥಾನದಲ್ಲಿ ಚತುರ್ಥಿಯ ಸಂಭ್ರಮ ಕಾಣಿಸುತ್ತಿದೆ. ಗಣೇಶನಿಗೆ ವಿಶೇಷ ಪೂಜೆ ಹಾಗೂ […]

ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ.
ಬಸವನಗುಡಿ ದೊಡ್ಡ ಗಣೇಶ ದೇವಸ್ಥಾನದಲ್ಲಿ ಚತುರ್ಥಿಯ ಸಂಭ್ರಮ ಕಾಣಿಸುತ್ತಿದೆ. ಗಣೇಶನಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಸೇವೆಯನ್ನು ಮಾಡಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಎಚ್ಚರಿಕೆಯೊಂದಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸರತಿ ಸಾಲಿನಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದಲ್ಲಿ ಧ್ಯಾನ ಹಾಗೂ ಕುಳಿತುಕೊಳ್ಳಲು ಅವಕಾಶ ಇಲ್ಲಾ. ದರ್ಶನ ಪಡೆದ ಭಕ್ತರು ಏಕಮುಖವಾಗಿ ದೇವಸ್ಥಾನದಿಂದ ಹೊರಕ್ಕೆ ಹೋಗಬೇಕು. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ದೇವಸ್ಥಾನದಲ್ಲಿ ತೀರ್ಥ ಹಾಗೂ ಪ್ರಸಾದ ಸೇವೆ ಇಲ್ಲಾ. ಮಂಗಳಾರತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ.
ಗಣೇಶ ಹಬ್ಬಕ್ಕೆ ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ ಇರುವುದಿಲ್ಲ ಎಂದು ನಿನ್ನೆ ತಿಳಿಸಲಾಗಿತ್ತು. ಆದರೆ ಹಬ್ಬದ ಕಾರಣ ವಿನಾಯಕನಿಗೆ ವಿಷೇಶ ಪೂಜೆ ಮಾಡಲಾಗುತ್ತಿದೆ. ಆದರೆ ಪ್ರತೀ ವರ್ಷದಂತೆ ಈ ವರ್ಷ ಆಚರಣೆ ಇರುವುದಿಲ್ಲ.