ಆಸ್ಪತ್ರೆ ಸಿಬ್ಬಂದಿಯ ಎಡವಟ್ಟು: ಮಗಳ ಮುಖವನ್ನ ಕೊನೇ ಬಾರಿ ನೋಡಲಾಗದೆ ತಾಯಿಯ ರೋದನೆ

ಚಿಕ್ಕಮಗಳೂರು : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿಶೇಷಚೇತನ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ನರಳಿ ನರಳಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗೌರಿ ಕಾಲುವೆಯ ವಿಶೇಷಚೇತನ ಯುವತಿ ನಾಫೀಯಾ ಮೃತ ದುರ್ದೈವಿ. ನಾಫೀಯಾ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿ. ಇತ್ತೀಚೆಗೆ, ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯುವತಿಯ ಕೊರೊನಾ ರಿಪೋರ್ಟ್ ಇಲ್ಲ ಎಂಬ ಕಾರಣದಿಂದಾಗಿ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ನಂತರ ಜಿಲ್ಲಾಸ್ಪತ್ರೆಗೆ ಯುವತಿಯನ್ನು ಕರೆದುಕೊಂಡು ಹೋಗಲಾಗಿದೆ. ಆದರೆ […]

ಆಸ್ಪತ್ರೆ ಸಿಬ್ಬಂದಿಯ ಎಡವಟ್ಟು: ಮಗಳ ಮುಖವನ್ನ ಕೊನೇ ಬಾರಿ ನೋಡಲಾಗದೆ ತಾಯಿಯ ರೋದನೆ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Jul 31, 2020 | 5:15 PM

ಚಿಕ್ಕಮಗಳೂರು : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿಶೇಷಚೇತನ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ನರಳಿ ನರಳಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಗೌರಿ ಕಾಲುವೆಯ ವಿಶೇಷಚೇತನ ಯುವತಿ ನಾಫೀಯಾ ಮೃತ ದುರ್ದೈವಿ. ನಾಫೀಯಾ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿ. ಇತ್ತೀಚೆಗೆ, ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯುವತಿಯ ಕೊರೊನಾ ರಿಪೋರ್ಟ್ ಇಲ್ಲ ಎಂಬ ಕಾರಣದಿಂದಾಗಿ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು.

ನಂತರ ಜಿಲ್ಲಾಸ್ಪತ್ರೆಗೆ ಯುವತಿಯನ್ನು ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ಯುವತಿಯನ್ನು ಮೂರು ಗಂಟೆಗಳ ಕಾಲ ಬೆಡ್ ನೀಡದೆ ಅಲೆದಾಡಿಸಿದ್ದರು. ಈ ಕಾರಣದಿಂದಾಗಿ ಯುವತಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಜುಲೈ 24ರಂದು ಸಾವನ್ನಪ್ಪಿದ್ದರು. ಆದರೆ, ಯುವತಿಗೆ ಕೊರೊನಾ ಸೋಂಕಿರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಆಕೆಯ ಮೃತದೇಹವನ್ನು ಸಂಬಂಧಿಕರಿಗೆ ನೀಡಿರಲಿಲ್ಲ.

ಆದರೆ ನಿನ್ನೆ ಯುವತಿಯ ಕೊರೊನಾ ವರದಿ ಬಂದಿದ್ದು, ಆಕೆಗೆ, ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಹೀಗಾಗಿ, ಆಸ್ಪತ್ರೆ ಸಿಬ್ಬಂದಿಯವರ ಎಡವಟ್ಟಿನಿಂದಾಗಿ ನನ್ನ ಮಗಳ ಮುಖವನ್ನು ಕೊನೇ ಬಾರಿ ನೋಡಲಿ ಆಗಲೇ ಇಲ್ಲ ಎಂದು ಆಕೆಯ ತಾಯಿ ಕಣ್ಣೀರಿಟ್ಟರು.

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ