ಚಾಲಕರೇ ಇರಲಿ ಎಚ್ಚರಾ! ಟೈರ್ ಬ್ಲಾಸ್ಟ್​ ಆಗಿ ನಡೀತು ಅವಘಡ

|

Updated on: May 14, 2020 | 10:24 AM

ಚಿತ್ರದುರ್ಗ: ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ಟೈರ್ ಬ್ಲಾಸ್ಟ್​ ಆಗಿ ರಸ್ತೆ ವಿಭಜಕಕ್ಕೆ ಗುದ್ದಿ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಡ್ಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಟ್ಯಾಂಕರ್ ಟೈರ್ ಬ್ಲಾಸ್ಟ್​ ಆದ ಕಾರಣ ಟ್ಯಾಂಕರ್ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ನಡೆದಿಲ್ಲ.

ಚಾಲಕರೇ ಇರಲಿ ಎಚ್ಚರಾ! ಟೈರ್ ಬ್ಲಾಸ್ಟ್​ ಆಗಿ ನಡೀತು ಅವಘಡ
Follow us on

ಚಿತ್ರದುರ್ಗ: ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ಟೈರ್ ಬ್ಲಾಸ್ಟ್​ ಆಗಿ ರಸ್ತೆ ವಿಭಜಕಕ್ಕೆ ಗುದ್ದಿ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಡ್ಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟ್ಯಾಂಕರ್ ಟೈರ್ ಬ್ಲಾಸ್ಟ್​ ಆದ ಕಾರಣ ಟ್ಯಾಂಕರ್ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ನಡೆದಿಲ್ಲ.

Published On - 8:16 am, Thu, 14 May 20