AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸ್ಥಾನಕ್ಕಾಗಿ ಗಡೇ ದುರ್ಗಾದೇವಿಗೆ ಚೀಟಿ ಬರೆದಿಟ್ಟ ರಾಮುಲು! ಮಸ್ಟ್ & ಕಂಪಲ್ಸರಿ ಅಂತೆ..

ಯಾದಗಿರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಗಡೇ ದುರ್ಗಾದೇವಿಗೆ ಚೀಟಿ ಬರೆದಿಟ್ಟು ತಮ್ಮ ಮನದಾಳದ ಮಾತನ್ನು ಹೇಳಿಕೊಂಡಿದ್ದಾರೆ. ಡೆಪ್ಯುಟಿ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಮಸ್ಟ್ & ಕಂಪಲ್ಸರಿ ಎಂದು ಪತ್ರದಲ್ಲಿ ಬರೆದಿದ್ದಾರಂತೆ! ದೇವಿ ಕೃಪೆಯಿಂದ ಡಿಕೆಶಿಗೆ ಕೆಪಿಸಿಸಿ ಪಟ್ಟ ಸಿಕ್ಕಿತ್ತಂತೆ! ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಯಾದಗಿರಿಗೆ ಆಗಮಿಸಿದ್ದ ಶ್ರೀರಾಮುಲು ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಲದಲ್ಲಿರುವ ಗಡೇ ದುರ್ಗಾದೇವಿ ದೇವಸ್ಥಾನ ಭೇಟಿ ನೀಡಿ ದೇವಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡು ತಾಯಿ ಎಂದು ಪತ್ರ ಬರೆದಿದ್ದಾರಂತೆ. ಈ ಹಿಂದೆ […]

DCM ಸ್ಥಾನಕ್ಕಾಗಿ ಗಡೇ ದುರ್ಗಾದೇವಿಗೆ ಚೀಟಿ ಬರೆದಿಟ್ಟ ರಾಮುಲು! ಮಸ್ಟ್ & ಕಂಪಲ್ಸರಿ ಅಂತೆ..
ಸಚಿವ ಬಿ.ಶ್ರೀರಾಮುಲು
ಆಯೇಷಾ ಬಾನು
|

Updated on:Sep 17, 2020 | 11:22 AM

Share

ಯಾದಗಿರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಗಡೇ ದುರ್ಗಾದೇವಿಗೆ ಚೀಟಿ ಬರೆದಿಟ್ಟು ತಮ್ಮ ಮನದಾಳದ ಮಾತನ್ನು ಹೇಳಿಕೊಂಡಿದ್ದಾರೆ. ಡೆಪ್ಯುಟಿ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಮಸ್ಟ್ & ಕಂಪಲ್ಸರಿ ಎಂದು ಪತ್ರದಲ್ಲಿ ಬರೆದಿದ್ದಾರಂತೆ!

ದೇವಿ ಕೃಪೆಯಿಂದ ಡಿಕೆಶಿಗೆ ಕೆಪಿಸಿಸಿ ಪಟ್ಟ ಸಿಕ್ಕಿತ್ತಂತೆ! ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಯಾದಗಿರಿಗೆ ಆಗಮಿಸಿದ್ದ ಶ್ರೀರಾಮುಲು ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಲದಲ್ಲಿರುವ ಗಡೇ ದುರ್ಗಾದೇವಿ ದೇವಸ್ಥಾನ ಭೇಟಿ ನೀಡಿ ದೇವಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡು ತಾಯಿ ಎಂದು ಪತ್ರ ಬರೆದಿದ್ದಾರಂತೆ. ಈ ಹಿಂದೆ ಕೂಡ ಡಿಕೆ ಶಿವಕುಮಾರ್ ದೇವಿ ದರ್ಶನ ಪಡೆದಿದ್ದರು. ಸಂಕಷ್ಟ ದೂರವಾಗುವಂತೆ ದೇವಿಗೆ ಮೊರೆ ಇಟ್ಟಿದ್ದರು. ದೇವಿ ಕೃಪೆಯಿಂದ ಡಿಕೆಶಿಗೆ ಕೆಪಿಸಿಸಿ ಪಟ್ಟ ಸಿಕ್ಕಿತ್ತು. ಡಿಕೆಶಿ ನಂತರ ಈಗ ಬಿ ಶ್ರೀರಾಮಲು ದೇವಿಯ ಮೊರೆ ಹೋಗಿದ್ದಾರೆ. ದೇವಸ್ಥಾನದ ಪೂಜಾರಿ ಮರಿಸ್ವಾಮಿ ಅವರಿಂದ ದೇವಿಗೆ ಅರ್ಚನೆ ಮಾಡಿಸಿದ್ದಾರೆ.

ಮನಸ್ಸಿನಲ್ಲಿರುವುದನ್ನು ದೇವಿಯ ಬಳಿ ಬೇಡಿಕೊಂಡಿದ್ದೇನೆ: ಇನ್ನು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಧ್ವಜರೋಹಣ ಬಳಿಕ ಮಾತನಾಡಿದ ಶ್ರೀರಾಮಲು ಗಡೇ ದುರ್ಗಾದೇವಿಗೆ ಪತ್ರ ಬರೆದಿರುವ ಬಗ್ಗೆ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ನನ್ನ ಮನಸ್ಸಿನಲ್ಲಿರುವುದನ್ನು ದೇವಿಯ ಬಳಿ ಬೇಡಿಕೊಂಡಿದ್ದೇನೆ. ದೇವಿ ಬಳಿ ಕೇಳಿಕೊಂಡಿದ್ದನ್ನು ಬಹಿರಂಗವಾಗಿ ಹೇಳಬಾರದು. ದೇವಿದರ್ಶನದಿಂದ ಒಳ್ಳೆಯದಾಗುತ್ತೆಂದು ಸ್ನೇಹಿತರು ಹೇಳಿದ್ರು. ಹೀಗಾಗಿ ಗಡೇ ದುರ್ಗಾದೇವಿಯ ದರ್ಶನ ಪಡೆದಿದ್ದೇನೆ. ಡಿಸಿಎಂ ಮಾಡೋದು ಬಿಡೋದು ಸಿಎಂ ವಿವೇಚನೆಗೆ ಬಿಟ್ಟಿದ್ದು. ಡಿಸಿಎಂ ಪಟ್ಟದ ಬಗ್ಗೆ ಮಾತನಾಡುವ ಸಂದರ್ಭ ಇದಲ್ಲ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಸಂದರ್ಭವಿದು ಎಂದು ಹೇಳಿದ್ರು.

Published On - 11:07 am, Thu, 17 September 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್