ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ಭಾರತ ಸರ್ಕಾರದ ವಿವಿಧ ಸಚಿವಾಲಯ,ಇಲಾಖೆ ಹಾಗೂ ಸಂಸ್ಥೆಗಳಲ್ಲಿ Combined Graduate ವರ್ಗದ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಡಿಸೆಂಬರ್ 21ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಅರ್ಹ ಅಭ್ಯರ್ಥಿಗಳು ssc.nic.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. 2021ರ ಜನವರಿ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.
SSC CGL 2020 ಅರ್ಹತಾ ಮಾನದಂಡಗಳು
ಸಹಾಯಕ ಲೆಕ್ಕಪರಿಶೋಧಕ ಅಧಿಕಾರಿ (Assistant Audit Officer)- ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅರ್ಹತೆ: ಸಿಎ/ ಸಿಎಸ್/ ಎಂಬಿಎ/ ಕಾಸ್ಟ್ & ಮ್ಯಾನೇಜ್ಮೆಂಟ್ ಅಕೌಂಟ್/ ಎಂ.ಕಾಮ್/ ವ್ಯವಹಾರ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿ.
ಸಂಖ್ಯಾಶಾಸ್ತ್ರೀಯ ತನಿಖಾಧಿಕಾರಿ ಗ್ರೇಡ್ II (Statistical Investigator Grade-II)- ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಸಂಖ್ಯಾಶಾಸ್ತ್ರ ಕೂಡ ಒಂದ ವಿಷಯವಾಗಿರುವುದು ಕಡ್ಡಾಯ
ಕಿರಿಯ ಸಂಖ್ಯಾಶಾಸ್ತ್ರೀಯ ಅಧಿಕಾರಿ (Junior Statistical Officer- ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕ್ಕೋತ್ತರ ಪದವಿ ಪಡೆದಿರಬೇಕು. 12ನೇ ತರಗತಿಯ ಗಣಿತ ವಿಷಯದಲ್ಲಿ ಶೇ.60 ಅಂಕ ಪಡೆದಿರಬೇಕು ಅಥವಾ ಪದವಿಯಲ್ಲಿ ಸಂಖ್ಯಾಶಾಸ್ತ್ರ ಅಧ್ಯಯನ ಮಾಡಿರಬೇಕು.
ಇತರೆ ಹುದ್ದೆಗಳು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಪದವಿ ಕೊನೆಯ ವರ್ಷದಲ್ಲಿ ಅಧ್ಯಯನ ಮಾಡುವವರು ಕೂಡ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ಹೇಗೆ?
ಶ್ರೇಣಿ-1, ಶ್ರೇಣಿ-2, ಶ್ರೇಣಿ-3 ಹಾಗೂ ಶ್ರೇಣಿ-4 ಹಂತದಲ್ಲಿ SSC CGL ಪರೀಕ್ಷೆ ಪರೀಕ್ಷೆ ನಡೆಯಲಿದೆ. ಈ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Bengaluru Tech Summit 2020 ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ: CM ಯಡಿಯೂರಪ್ಪ