SSLC ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿನಿ, ಪರೀಕ್ಷಾ ಕೇಂದ್ರವೆಲ್ಲಾ ಢವಢವ

ಕೊಪ್ಪಳ: SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್​ ವರದಿ ಬಂದಿರುವ ಘಟನೆ ಜಿಲ್ಲೆಯ ಕಾರಟಗಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಕಾರಟಗಿಯ ಕಾಲೋನಿಯೊಂದರ ನಿವಾಸಿಯಾಗಿರುವ ವಿದ್ಯಾರ್ಥಿನಿಗೆ ಕೆಲವು ದಿನಗಳ ಹಿಂದೆ ಕೊರೊನಾ​ ಟೆಸ್ಟ್​ ನಡೆಸಲಾಗಿತ್ತು. ಆಕೆಗೆ ಇಂದು ಪಾಸಿಟಿವ್​ ಎಂದು ತಿಳಿದುಬಂದಿದೆ. ಹಾಗಾಗಿ, ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಿದರು. ಜೊತೆಗೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್​ ಸಹ […]

SSLC ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿನಿ, ಪರೀಕ್ಷಾ ಕೇಂದ್ರವೆಲ್ಲಾ ಢವಢವ
ವಿದ್ಯಾಗಮ ಶಿಕ್ಷಣ ತರಗತಿ ಆರಂಭ
Follow us
KUSHAL V
| Updated By:

Updated on: Jul 01, 2020 | 1:56 PM

ಕೊಪ್ಪಳ: SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್​ ವರದಿ ಬಂದಿರುವ ಘಟನೆ ಜಿಲ್ಲೆಯ ಕಾರಟಗಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಕಾರಟಗಿಯ ಕಾಲೋನಿಯೊಂದರ ನಿವಾಸಿಯಾಗಿರುವ ವಿದ್ಯಾರ್ಥಿನಿಗೆ ಕೆಲವು ದಿನಗಳ ಹಿಂದೆ ಕೊರೊನಾ​ ಟೆಸ್ಟ್​ ನಡೆಸಲಾಗಿತ್ತು. ಆಕೆಗೆ ಇಂದು ಪಾಸಿಟಿವ್​ ಎಂದು ತಿಳಿದುಬಂದಿದೆ. ಹಾಗಾಗಿ, ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಿದರು. ಜೊತೆಗೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್​ ಸಹ ತರಿಸಲಾಯಿತು.

ಈ ಘಟನೆಯಿಂದ ಪರೀಕ್ಷೆ ಬರೆದ ಇತರೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆಮಾಡಿದೆ. ಸೋಂಕಿತೆ ಜೊತೆ 17 ವಿದ್ಯಾರ್ಥಿಗಳು ಪ್ರಾಥಮಿಕ ಸಂಪರ್ಕದಲ್ಲಿದ್ದರು ಎಂದು ಸಹ ತಿಳಿದುಬಂದಿದೆ.