ಮೂರು ಸಾವಿರ ಮಠದ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರ, ಆತಂಕದಲ್ಲಿ ಪೋಷಕರು

ಹುಬ್ಬಳ್ಳಿ: ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಶುರು ಆಗಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಒಂದು ಮಟ್ಟಿಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದ ಪಕ್ಕದ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ನಿನ್ನೆಯಷ್ಟೇ ಈ ಮಠ ಸೀಲ್​ಡೌನ್ ಆಗಿದೆ. ಹೀಗಾಗಿ ಕಂಟೈನ್ಮೆಂಟ್ ಪ್ರದೇಶದ ಪಕ್ಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರ ನಿಗದಿಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ. ಮೂರು ಸಾವಿರ ಮಠದ ಹತ್ತಿರದ ಬಡಾವಣೆಯ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಮಠದ ಸುತ್ತಾ ಸೀಲ್​ಡೌನ್ […]

ಮೂರು ಸಾವಿರ ಮಠದ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರ, ಆತಂಕದಲ್ಲಿ ಪೋಷಕರು
Follow us
ಆಯೇಷಾ ಬಾನು
|

Updated on:Jun 24, 2020 | 11:22 AM

ಹುಬ್ಬಳ್ಳಿ: ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಶುರು ಆಗಲಿವೆ. ಹೀಗಾಗಿ ಶಿಕ್ಷಣ ಇಲಾಖೆ ಒಂದು ಮಟ್ಟಿಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದ ಪಕ್ಕದ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ನಿನ್ನೆಯಷ್ಟೇ ಈ ಮಠ ಸೀಲ್​ಡೌನ್ ಆಗಿದೆ. ಹೀಗಾಗಿ ಕಂಟೈನ್ಮೆಂಟ್ ಪ್ರದೇಶದ ಪಕ್ಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರ ನಿಗದಿಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಮೂರು ಸಾವಿರ ಮಠದ ಹತ್ತಿರದ ಬಡಾವಣೆಯ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಮಠದ ಸುತ್ತಾ ಸೀಲ್​ಡೌನ್ ಮಾಡಲಾಗಿತ್ತು. ಆದ್ರೆ ನಾಳೆ ಮಠದ ಪಕ್ಕದ ಶಾಲೆಯಲ್ಲಿ 372 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಇನ್ನು ಧಾರವಾಡದ ಮಳಮಡ್ಡಿ‌ ಬಡಾವಣೆಯಲ್ಲಿರೋ ಕೆ.ಇ.ಬೋರ್ಡ್ ಶಾಲೆಯ ಪರೀಕ್ಷಾ ಕೇಂದ್ರದ ಪಕ್ಕದ ಗೋಪಾಲಪುರ ಬಡಾವಣೆ ಸೀಲ್​ಡೌನ್ ಆಗಿದೆ. ಇಲ್ಲೂ ಅದೇ ಕಥೆ. ಇಲ್ಲಿ ಸುಮಾರು 336 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿಕ್ಷಕಿಯೊಬ್ಬರಿಗೆ ಕೊರೊನಾ ಬಂದಿದ್ದರಿಂದ ಸೀಲ್‌ಡೌನ್ ಆಗಿತ್ತು.

ಮೂರು ಸಾವಿರ ಮಠದ ಶಾಲೆಗೆ ಪೊಲೀಸರ ಆಗಮನ ಟಿವಿ9ನಲ್ಲಿ ಈ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಮೂರು ಸಾವಿರ ಮಠದ ಶಾಲೆಗೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸೀಲ್​ಡೌನ್ ಪ್ರದೇಶ ಪಕ್ಕದಲ್ಲೇ SSLC ಎಕ್ಸಾಂ ಕೇಂದ್ರ ಇರುವುದರಿಂದ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ.

Published On - 10:43 am, Wed, 24 June 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ