ಚಾಮರಾಜನಗರ: SSLC ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ ಘಟನೆ ಚಾಮರಾಜನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದ ಬಳಿ ಅಸ್ವಸ್ಥಗೊಂಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬರುವ ಭಯದಲ್ಲಿ ಈ ಮೊದಲೇ ಮನೆಯ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡು ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ, ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದಿದ್ದಾಳೆ. ವಿದ್ಯಾರ್ಥಿನಿಗೆ ಸ್ಥಳದಲ್ಲೇ ಇದ್ದ ಆರೋಗ್ಯ ಸಹಾಯಕಿಯಿಂದ ಚಿಕಿತ್ಸೆ ಕೊಡಿಸಲಾಗಿದೆ. ಈ ವೇಳೆ ಕೇಂದ್ರಕ್ಕೆ ಬಂದ ಡಿಸಿ ರವಿ, ಎಸ್ಪಿ ಆನಂದ್ ಕುಮಾರ್ ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ಧೈರ್ಯ ತುಂಬಿದ್ದಾರೆ.