ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​

Updated on: Sep 07, 2020 | 4:34 PM

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.



ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us