ಕರ್ನಾಟಕ ಬಗ್ಗೆ ಮಹಾಪ್ರಬಂಧ ಮಂಡಿಸಿ ಮೈಸೂರು ವಿವಿ ಡಾಕ್ಟರೇಟ್ ಪಡೆದ ಮುಖ್ಯ ಚುನಾವಣಾಧಿಕಾರಿ
ಬೆಂಗಳೂರು: ರಾಜ್ಯದ ಮೊದಲ ವಿಶ್ವವಿದ್ಯಾನಿಲಯ ಹಾಗೂ 100ನೇ ಘಟಿಕೋತ್ಸವವನ್ನು ಆಚರಿಸಿಕೊಂಡ ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ನೀಡಿ ಗೌರವಿಸಿದೆ. ಹಿರಿಯ ಐ.ಎ.ಎಸ್. ಅಧಿಕಾರಿ 58 ವರ್ಷದ ಸಂಜೀವ್ ಕುಮಾರ್ ಅವರು ಪ್ರಸ್ತುತ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನಗಳು ವಿಭಾಗದಲ್ಲಿ (Development Studies) ಡಾ. ಶ್ರೀಜಯ್ ದೇವರಾಜ್ ಅರಸ್ ಅವರ ಮಾರ್ಗದರ್ಶನದಲ್ಲಿ “MGNREGA, Rights, Processes and Sustainble Livelihood: A […]
ಬೆಂಗಳೂರು: ರಾಜ್ಯದ ಮೊದಲ ವಿಶ್ವವಿದ್ಯಾನಿಲಯ ಹಾಗೂ 100ನೇ ಘಟಿಕೋತ್ಸವವನ್ನು ಆಚರಿಸಿಕೊಂಡ ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ನೀಡಿ ಗೌರವಿಸಿದೆ. ಹಿರಿಯ ಐ.ಎ.ಎಸ್. ಅಧಿಕಾರಿ 58 ವರ್ಷದ ಸಂಜೀವ್ ಕುಮಾರ್ ಅವರು ಪ್ರಸ್ತುತ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನಗಳು ವಿಭಾಗದಲ್ಲಿ (Development Studies) ಡಾ. ಶ್ರೀಜಯ್ ದೇವರಾಜ್ ಅರಸ್ ಅವರ ಮಾರ್ಗದರ್ಶನದಲ್ಲಿ “MGNREGA, Rights, Processes and Sustainble Livelihood: A Critical Study in Karnataka” ಮಹಾಪ್ರಬಂಧವನ್ನು ಮಂಡಿಸಿದ್ದರು. ನಿನ್ನೆ ನಡೆದ ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.