ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ರನ್ನು ವರ್ಗಾವಣೆಗೊಳಿಸದಂತೆ ಸಿಎಂ ಬೊಮ್ಮಾಯಿಗೆ ರಾಜ್ಯ ನೌಕರರ ಸಂಘದಿಂದ ಪತ್ರ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ರನ್ನು ವರ್ಗಾವಣೆ ಮಾಡದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ರನ್ನು (Tushar Girinath) ವರ್ಗಾವಣೆ ಮಾಡದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ವರ್ಗಾವಣೆ ಮಾಡಿದರೆ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಕೊನೆಗೆ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿ, ಚಿಲುಮೆ ಸಂಸ್ಥೆಯಿಂದ ಮತದಾರ ಮಾಹಿತಿ ಸಂಗ್ರಹ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಅಮಾನತು ಮಾಡಿ ಕೇಂದ್ರ ಚುನಾವಣೆ ಆಯೋಗ ತನಿಖೆಗೆ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: ವೋಟರ್ ಐಡಿ ಅಕ್ರಮ: ಮತ್ತೆ ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಡಿ.24ರವರೆಗೆ ಸಮಯಾವಕಾಶ
ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಎಸ್.ರಂಗಪ್ಪ ಅವರು ಶಿವಾಜಿನಗರ, ಚಿಕ್ಕಪೇಟೆ ಕ್ಷೇತ್ರದ ಉಸ್ತುವಾರಿ ಸಹ ಆಗಿದ್ದರು. ಇನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿರುವ ಕೆ.ಶ್ರೀನಿವಾಸ್ ಅವರು ಮಹದೇವಪುರ ಕ್ಷೇತ್ರದ ಉಸ್ತುವಾರಿ ಅಧಿಕಾರಿ ಆಗಿದ್ದರು. ಖಾಲಿಯಾದ ಈ ಸ್ಥಳಕ್ಕೆ ಸರ್ಕಾರ ಈಗಾಗಲೇ ಹೊಸಬರನ್ನು ನೇಮಿಸಿತ್ತು. ಇದು ಬಿಬಿಎಂಪಿ ಕಾರ್ಯವೈಖರಿಗೆ ಮಸಿ ಬಳದಂತಾಗಿದೆ.
ಇದನ್ನೂ ಓದಿ: ಬೆಂಗಳೂರು ವೋಟರ್ ಐಡಿ ಅಕ್ರಮ ಪ್ರಕರಣದ ತನಿಖೆಗಾಗಿ 7 IAS ಅಧಿಕಾರಿಗಳನ್ನು ನೇಮಿಸಿದ ಕೇಂದ್ರ ಚುನಾವಣೆ ಆಯೋಗ
ಈ ಕಹಿ ಬೆಳವಣಿಗೆ ಮಾಸುವ ಮುನ್ನವೇ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುವ ಚಿಂತನೆ ನಡೆಸಿದೆ ಎನ್ನುವ ಸಂಶಯ ವ್ಯಕ್ತವಾಗಿದೆ. ಈ ವಾಸನೆಯನ್ನು ಹಿಡಿದ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆಯುವ ಮುಖಾಂತರ ಬಿಸಿ ಮುಟ್ಟಿಸಿದೆ.
ಇನ್ನೂ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣ ತನಿಖೆಗೆ ಕೇಂದ್ರ ಚುನಾವಣಾ ಆಯೋಗ 7 ಐಎಎಎಸ್ ಅಧಿಕಾರಿಗಳನ್ನು ನೇಮಿಸಿದ್ದು, ತನಿಖೆ ಚುರುಕುಗೊಂಡಿದೆ. ಮತ್ತು ವೋಟರ್ ಐಡಿ ಪರೀಷ್ಕರಣೆಗೆ ಬಿಬಿಎಂಪಿ ಹೊರತುಪಡಿಸಿ ವಿಶೇಷ ಅಧಿಕಾರಿಯನ್ನು ನೇಮಿಸುವಂತೆ ಸೂಚನೆ ನೀಡಿದೆ. ಹಾಗೇ ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:58 pm, Tue, 29 November 22