ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್ ಟವರ್
ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್ ಟವರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ. ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ […]
ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್ ಟವರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ.
ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ (ಎನ್‍ಬಿಸಿಸಿ) ಸಿದ್ಧಪಡಿಸಿರುವ ಈ ಪ್ರಸ್ತಾವನೆ ಎಫ್‌ಎಆರ್ 2.5 ಅನುಪಾತದಲ್ಲಿ ಸಿದ್ಧಪಡಿಸಲಾಗಿದೆ. ಆದ್ರೆ ಆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಳು ಎಫ್‌ಎಆರ್ 4.0 ಅನುಪಾತದಲ್ಲಿವೆ. ಹೀಗಾಗಿ ಇದೇ ಮಾದರಿಯಲ್ಲಿ ಟ್ವಿನ್ ಟವರ್ ನಿರ್ಮಿಸಬೇಕಿರುವ ಅನಿವಾರ್ಯತೆ ಎದುರಾಗಿದೆ.ಹಾಗಾಗಿ ಈ ಪ್ರಸ್ತಾವನೆಯನ್ನು ಎಫ್‍ಎಆರ್ 4.0 ಅನುಪಾತದೊಂದಿಗೆ ಮರುವಿನ್ಯಾಸಗಳಿಸುವಂತೆ ಡಿಸಿಎಂ ಮತ್ತು ಲೋಕೋಪಯೋಗಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಒಡಂಬಡಿಕೆಯ ಕರಡು ಪ್ರತಿಯನ್ನು ಸಿದ್ದಪಡಿಸಿ ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತಿಯೊಂದಿಗೆ ಅನುಮೋದನೆ ಪಡೆಯಬೇಕು. ಪ್ರಸ್ತಾವನೆಯ ಡಿಪಿಆರ್ ಸಿದ್ದಪಡಿಸಲು ಮುಂದಿನ 15 ದಿನಗಳೊಳಗೆ ಸಚಿವ ಸಂಪುಟದ ಅನುಮೋದನೆ ಪಡೆಯಬೇಕು. ಒಡಂಬಡಿಕೆಯ ಕರಡು ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸೂಚನೆ ನೀಡಿದ್ದಾರೆ.