ಕೊರೊನಾ ಕರಾಳತೆ, ನೀಟ್​ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಇದರಿಂದ ವಿದ್ಯಾರ್ಥಿನಿಯು ನಿರಾತಂಕದಿಂದ ಬುಧವಾರ ಪರೀಕ್ಷೆ ಬರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಬೆಂಗಳೂರಿನ ಬಸವನಗುಡಿಯ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆದಿದ್ದಾಳೆ. ಕೋವಿಡ್ ನಿಂದಾದ ಬದಲಾವಣೆಗಳು ತನುಜಾಗೆ ನೀಟ್ ಪರೀಕ್ಷೆ ಬರೆಯಲು ಅಡ್ಡಿ ಮಾಡಿದ್ದವು. ಈ ಸಮಸ್ಯೆಯನ್ನರಿತು ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ […]

ಕೊರೊನಾ ಕರಾಳತೆ, ನೀಟ್​ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು
Follow us
ಸಾಧು ಶ್ರೀನಾಥ್​
|

Updated on:Oct 14, 2020 | 6:27 PM

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಇದರಿಂದ ವಿದ್ಯಾರ್ಥಿನಿಯು ನಿರಾತಂಕದಿಂದ ಬುಧವಾರ ಪರೀಕ್ಷೆ ಬರೆದಿದ್ದಾಳೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಬೆಂಗಳೂರಿನ ಬಸವನಗುಡಿಯ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆದಿದ್ದಾಳೆ. ಕೋವಿಡ್ ನಿಂದಾದ ಬದಲಾವಣೆಗಳು ತನುಜಾಗೆ ನೀಟ್ ಪರೀಕ್ಷೆ ಬರೆಯಲು ಅಡ್ಡಿ ಮಾಡಿದ್ದವು. ಈ ಸಮಸ್ಯೆಯನ್ನರಿತು ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಅಡ್ಡಿ, ಆತಂಕವಿಲ್ಲದೆ ಆಕೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.

ಆಗಿದ್ದೇನು? ಶಿವಮೊಗ್ಗದ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿನಿ ತನುಜಾ ವೈದ್ಯೆಯಾಗಿ ಸಮಾಜದ ಸೇವೆ ಮಾಡುವ ಕನಸು ಹೊತ್ತಿದ್ದಾಳೆ. ಈಕೆಯ ತಂದೆ ನಾಗರಾಜ ಕೃಷಿಕರಾಗಿದ್ದು, ಮಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ಕಳೆದ ವರ್ಷ ತನುಜಾ ಪಿಯುಸಿ ಪೂರ್ಣಗೊಳಿಸಿದ್ದಳು. ಈಕೆಯ ಪ್ರತಿಭೆಯನ್ನು ಮೆಚ್ಚಿದ್ದ ನವೋದಯ ಶಾಲೆಯ ಆಡಳಿತ ಮಂಡಳಿ ಪುಣೆಯಲ್ಲಿ ನಡೆಯುವ ಕೋಚಿಂಗ್‍ಗೂ ಈಕೆಯನ್ನು ಆಯ್ಕೆ ಮಾಡಿತ್ತು.

ಸೆಪ್ಟೆಂಬರ್ 13 ರಂದು ಎನ್‍ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ನೀಟ್ ಪರೀಕ್ಷೆ ಏರ್ಪಡಿಸಿತ್ತು. ಈ ವೇಳೆ ತನುಜಾ ಅವರ ಮನೆಯ ಬಳಿ ಕಂಟೇನ್ಮೆಂಟ್ ವಲಯವನ್ನು ಘೋಷಿಸಲಾಗಿತ್ತು. ಜತೆಗೆ, ತನುಜಾಗೂ ಜ್ವರ ಬಂದಿದ್ದರಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ತನುಜಾ ಆಸೆಯೇ ಕಮರಿಹೋಗುವ ಆತಂಕ ಉಂಟಾಗಿತ್ತು. ಆದರೆ ನಂತರ ಸುಪ್ರಿಂ ಕೋರ್ಟ್ ನಿರ್ದೇಶನದ ಮೇರೆಗೆ, ಎನ್‍ಟಿಎ ಮತ್ತೊಮ್ಮೆ ಪರೀಕ್ಷೆ ಏರ್ಪಡಿಸಿತು. ಆದರೆ ಈ ಬಾರಿ ಪರೀಕ್ಷೆ ಬರೆಯಲು ಕೋವಿಡ್ ಸಂಬಂಧಿತ ವರದಿ ಹಾಗೂ ಕೆಲ ದಾಖಲೆಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಎನ್‍ಟಿಎ ಸೂಚಿಸಿತ್ತು.

ಈ ಅವಕಾಶದಿಂದ ಮತ್ತೆ ಸಂತಸಗೊಂಡ ತನುಜಾ, ದಾಖಲೆಗಳನ್ನು ಇ-ಮೇಲ್ ಮಾಡಲು ಉತ್ಸುಕಳಾಗಿದ್ದಳು. ಆದರೆ ಹಳ್ಳಿಯಲ್ಲಿನ ನೆಟ್ ವರ್ಕ್ ಸಮಸ್ಯೆ ಹಾಗೂ ಕೋವಿಡ್ ವರದಿಗೆ ಸಂಬಂಧಿಸಿದ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಸರಿಯಾದ ಸಮಯದಲ್ಲಿ ಇ-ಮೇಲ್ ಕಳುಹಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಪರೀಕ್ಷೆ ಬರೆಯಲು ಇದ್ದ ಮತ್ತೊಂದು ಅವಕಾಶವೂ ನೆಲ ಕಚ್ಚಿತ್ತು.

ಈ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿ ತನುಜಾ ಹೇಳಿಕೊಂಡಿದ್ದನ್ನು ಗಮನಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಡಾ.ಕೆ.ಸುಧಾಕರ್, ಮಧ್ಯಪ್ರವೇಶಿಸಿ ಸಹಾಯ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಚನೆ ನೀಡಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಎನ್ ಟಿಎ ತಾಂತ್ರಿಕ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಮೂಲಕ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಮಗಳು ಇನ್ನು ನೀಟ್ ಪರೀಕ್ಷೆ ಬರೆಯಲು ಸಾಧ್ಯವೇ ಇಲ್ಲ ಎಂಬ ಆತಂಕ ಉಂಟಾಗಿತ್ತು. ಆದರೆ ಸರಿಯಾದ ಸಮಯದಲ್ಲಿ ಸಿಎಂ, ಸಚಿವರು ಮಧ್ಯ ಪ್ರವೇಶ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ದಾಖಲೆಗಳನ್ನು ಸಲ್ಲಿಸುವುದು ತಡವಾಗಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಪರೀಕ್ಷೆ ನಡೆಸುವ ಏಜೆನ್ಸಿಯವರು ಹೇಳಿದ್ದರು. ಸಿಎಂ ಹಾಗೂ ಸಚಿವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ತನುಜಾ ತಾಯಿ ಹಿರಿಯಮ್ಮ ಕೃತಜ್ಞತೆ ತಿಳಿಸಿದ್ದಾರೆ.

ಸರ್ಜನ್ ಆಗಿ ಜನರ ಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷೆ ಇದೆ. ಈಗ ನೀಟ್ ಪರೀಕ್ಷೆಯನ್ನು ಯಾವುದೇ ಆತಂಕ ಇಲ್ಲದೆ ಬರೆದಿದ್ದೇನೆ. ಪರೀಕ್ಷೆ ಬಹಳ ಚೆನ್ನಾಗಿತ್ತು ಎಂದೆನಿಸಿದೆ. ಸಿಎಂ ಹಾಗೂ ಸಚಿವರಿಗೆ ಧನ್ಯವಾದ. -ತನುಜಾ, ವಿದ್ಯಾರ್ಥಿನಿ

Published On - 6:25 pm, Wed, 14 October 20

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್