ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು
ಬೆಂಗಳೂರು: ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನುಮತಿಯಿಲ್ಲದೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಸರ್ಕಾರಿ ಕಲಾ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ಹೇಳಿದ್ದಾರೆ. ಅನುಮತಿಯಿಲ್ಲದೇ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಭಿತ್ತಿಪತ್ರ ಪ್ರದರ್ಶಿಸಿದ್ದಾರೆ. ಸರೋವರ್, ಚಿತಾವರ್, ರಾಜಗೋಪಾಲ್, ಅಮೃತಾ ಸೇರಿದಂತೆ ಇತರರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. NMKRV, ಮೌಂಟ್ ಕಾರ್ಮಲ್, […]
ಬೆಂಗಳೂರು: ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನುಮತಿಯಿಲ್ಲದೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಸರ್ಕಾರಿ ಕಲಾ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ಹೇಳಿದ್ದಾರೆ.
ಅನುಮತಿಯಿಲ್ಲದೇ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಭಿತ್ತಿಪತ್ರ ಪ್ರದರ್ಶಿಸಿದ್ದಾರೆ. ಸರೋವರ್, ಚಿತಾವರ್, ರಾಜಗೋಪಾಲ್, ಅಮೃತಾ ಸೇರಿದಂತೆ ಇತರರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. NMKRV, ಮೌಂಟ್ ಕಾರ್ಮಲ್, ಕ್ರೈಸ್ಟ್ ಸೇರಿದಂತೆ ಇತರ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಶಂಕೆಯಿದೆ. ಕೂಲಂಕುಶವಾಗಿ ಪರಿಶೀಲನೆ ಮಾಡಿದ ನಂತರ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ 244 ಜನರು ವಶಕ್ಕೆ: ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆಸಿದವರ ವಿರುದ್ಧ ಒಟ್ಟು 10 ಎಫ್ಐಆರ್ ದಾಖಲಾಗಿದೆ. ಬೆಂಗಳೂರಲ್ಲಿ ಈವರೆಗೆ 244 ಜನರನ್ನ ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಡುವವರ ಬಗ್ಗೆ ಕಣ್ಣಿದ್ದೇವೆ. ಪೌರತ್ವ ತಿದ್ದುಪಡಿ ಕಾಯ್ದೆ ಪರ ಕಾರ್ಯಕ್ರಮ ಮಾಡುವವರೂ ಮುಂದೆ ಬರ್ತಿದ್ದಾರೆ. ಅವರಿಗೂ ನಾವು ಅವಕಾಶ ಕೊಡುವುದಿಲ್ಲ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಶಾಂತಿಯುತವಾಗಿ ನಗರ ಇರಬೇಕು ಅನ್ನೋದೆ ನಮ್ಮ ಆಶಯ ಎಂದರು.
Published On - 10:43 am, Sat, 21 December 19