ದೊಡ್ಡಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ?
ಹಾಸನ: ದೇವೇಗೌಡರ ಕುಟುಂಬದ ಮತ್ತೊಂದು ಕುಡಿಯ ರಾಜಕೀಯ ಎಂಟ್ರಿಗೆ ವೇದಿಕೆ ಸಜ್ಜಾಗಿದೆ. ಶಾಸಕ HD ರೇವಣ್ಣರವರ ಹಿರಿಯ ಪುತ್ರ ಡಾ. ಸೂರಜ್ ರೇವಣ್ಣ ರಾಜಕೀಯಕ್ಕೆ ಎಂಟ್ರಿಯಾಗಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸೂರಜ್ ರೇವಣ್ಣ HDCC ಬ್ಯಾಂಕ್ ಮೂಲಕ ಸೇವಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. HDCC ಬ್ಯಾಂಕ್ನ ನಿರ್ದೇಶಕರಾಗಿ ಸೂರಜ್ ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಳೆನರಸೀಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸೂರಜ್ ರೇವಣ್ಣ ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು. DCC […]

ಹಾಸನ: ದೇವೇಗೌಡರ ಕುಟುಂಬದ ಮತ್ತೊಂದು ಕುಡಿಯ ರಾಜಕೀಯ ಎಂಟ್ರಿಗೆ ವೇದಿಕೆ ಸಜ್ಜಾಗಿದೆ. ಶಾಸಕ HD ರೇವಣ್ಣರವರ ಹಿರಿಯ ಪುತ್ರ ಡಾ. ಸೂರಜ್ ರೇವಣ್ಣ ರಾಜಕೀಯಕ್ಕೆ ಎಂಟ್ರಿಯಾಗಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸೂರಜ್ ರೇವಣ್ಣ HDCC ಬ್ಯಾಂಕ್ ಮೂಲಕ ಸೇವಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. HDCC ಬ್ಯಾಂಕ್ನ ನಿರ್ದೇಶಕರಾಗಿ ಸೂರಜ್ ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಳೆನರಸೀಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸೂರಜ್ ರೇವಣ್ಣ ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು.
DCC ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ HD ರೇವಣ್ಣ ತಮ್ಮ ಮತ್ತೊಬ್ಬ ಮಗನಿಗೂ ಅಧಿಕಾರ ಕೊಡಿಸಿದ್ದು, ಡಾ. ಸೂರಜ್ ರೇವಣ್ಣ ಕೆಲವೇ ದಿನಗಳಲ್ಲಿ HDCC ಬ್ಯಾಂಕ್ ಅಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ.




