ದೊಡ್ಡಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ?

ಹಾಸನ: ದೇವೇಗೌಡರ ಕುಟುಂಬದ ಮತ್ತೊಂದು ಕುಡಿಯ‌ ರಾಜಕೀಯ ಎಂಟ್ರಿಗೆ ವೇದಿಕೆ ಸಜ್ಜಾಗಿದೆ. ಶಾಸಕ HD ರೇವಣ್ಣರವರ ಹಿರಿಯ ಪುತ್ರ ಡಾ. ಸೂರಜ್ ರೇವಣ್ಣ ರಾಜಕೀಯಕ್ಕೆ ಎಂಟ್ರಿಯಾಗಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸೂರಜ್ ರೇವಣ್ಣ HDCC ಬ್ಯಾಂಕ್ ಮೂಲಕ ಸೇವಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. HDCC ಬ್ಯಾಂಕ್​ನ ನಿರ್ದೇಶಕರಾಗಿ ಸೂರಜ್ ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಳೆನರಸೀಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸೂರಜ್ ರೇವಣ್ಣ ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು. DCC […]

ದೊಡ್ಡಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ?
ಸಾಧು ಶ್ರೀನಾಥ್​ Edited By:

Updated on: Sep 20, 2020 | 2:24 PM

ಹಾಸನ: ದೇವೇಗೌಡರ ಕುಟುಂಬದ ಮತ್ತೊಂದು ಕುಡಿಯ‌ ರಾಜಕೀಯ ಎಂಟ್ರಿಗೆ ವೇದಿಕೆ ಸಜ್ಜಾಗಿದೆ. ಶಾಸಕ HD ರೇವಣ್ಣರವರ ಹಿರಿಯ ಪುತ್ರ ಡಾ. ಸೂರಜ್ ರೇವಣ್ಣ ರಾಜಕೀಯಕ್ಕೆ ಎಂಟ್ರಿಯಾಗಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸೂರಜ್ ರೇವಣ್ಣ HDCC ಬ್ಯಾಂಕ್ ಮೂಲಕ ಸೇವಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. HDCC ಬ್ಯಾಂಕ್​ನ ನಿರ್ದೇಶಕರಾಗಿ ಸೂರಜ್ ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಳೆನರಸೀಪುರ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸೂರಜ್ ರೇವಣ್ಣ ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು.

DCC ಬ್ಯಾಂಕ್‌ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ HD ರೇವಣ್ಣ ತಮ್ಮ ಮತ್ತೊಬ್ಬ ಮಗನಿಗೂ ಅಧಿಕಾರ ಕೊಡಿಸಿದ್ದು, ಡಾ. ಸೂರಜ್ ರೇವಣ್ಣ ಕೆಲವೇ ದಿನಗಳಲ್ಲಿ HDCC ಬ್ಯಾಂಕ್ ಅಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us