ಮಧ್ಯಾಹ್ನ 1 ರಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್, ತಹಶೀಲ್ದಾರ್ ಆದೇಶ ಎಲ್ಲಿ?
ಚಿತ್ರದುರ್ಗ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿನಲ್ಲಿ ಲಾಕ್‌ಡೌನ್ ಮಾಡಲು ತಹಶೀಲ್ದಾರ್ ಮುಂದಾಗಿದ್ದಾರೆ. ಆಂಧ್ರದ ಗಡಿ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಲಾಕ್‌ಡೌನ್ ಮಾಡಲಾಗುತ್ತಿದ್ದು, ವ್ಯಾಪಾರ ವಹಿವಾಟಿಗೆ ಸಮಯ ನಿಗದಿಪಡಿಸಲಾಗಿದೆ. ಈ ವೇಳೆ ಮಾತ್ರ ವ್ಯಾಪಾರ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುಯತ್ತೆ. ಬೆಳಗ್ಗೆ 5ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಬಹುದು. ಇದಾದ ಮೇಲೆ […]
ಚಿತ್ರದುರ್ಗ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿನಲ್ಲಿ ಲಾಕ್‌ಡೌನ್ ಮಾಡಲು ತಹಶೀಲ್ದಾರ್ ಮುಂದಾಗಿದ್ದಾರೆ.
ಆಂಧ್ರದ ಗಡಿ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಲಾಕ್‌ಡೌನ್ ಮಾಡಲಾಗುತ್ತಿದ್ದು, ವ್ಯಾಪಾರ ವಹಿವಾಟಿಗೆ ಸಮಯ ನಿಗದಿಪಡಿಸಲಾಗಿದೆ. ಈ ವೇಳೆ ಮಾತ್ರ ವ್ಯಾಪಾರ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುಯತ್ತೆ.
ಬೆಳಗ್ಗೆ 5ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಬಹುದು. ಇದಾದ ಮೇಲೆ ಅಂದ್ರೆ ಮಧ್ಯಾಹ್ನ 1 ಗಂಟೆಯಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ಮೊಳಕಾಲ್ಮೂರು ತಹಶೀಲ್ದಾರ್ ಬಸವರಾಜ್ ಆದೇಶಿಸಿದ್ದಾರೆ. ಮುಂದಿನ ಆದೇಶದವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.