AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

SP Jananathan Death: ನಿರ್ದೇಶಿಸಿದ ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ ಎಸ್​.ಪಿ. ಜನನಾಥನ್​ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಭಾನುವಾರ ಅವರು ಹೃದಯಾಘಾತದಿಂದ ನಿಧನರಾದರು.

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ
ಎಸ್​.ಪಿ. ಜನನಾಥನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 14, 2021 | 3:21 PM

ವಿಶೇಷ ಸಿನಿಮಾಗಳ ಮೂಲಕ ತಮಿಳು ಚಿತ್ರರಂಗಕ್ಕೆ ಕೊಡುಗೆ ನೀಡಿದ್ದ ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಅವರು ಭಾನುವಾರ (ಮಾ.14) ನಿಧನರಾದರು. ಅವರ ಅಗಲಿಕೆಗೆ ಕಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜನನಾಥನ್ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ.

ಕಳೆದ ಗುರುವಾರವೇ (ಮಾ.11) ಎಸ್​.ಪಿ. ಜನನಾಥನ್​ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಆಸ್ಪತ್ರೆಯಲ್ಲೇ ಅವರಿಗೆ ಹೃದಯಾಘಾತ ಆಯಿತು ಎಂದು ವರದಿ ಆಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಎಸ್​.ಪಿ. ಜನನಾಥನ್ ನಿರ್ದೇಶಿಸಿದ್ದ ಮೊದಲ ಸಿನಿಮಾ ‘ಇಯರ್​ಕೈ’ (2003) ಬಾಕ್ಸ್​ ಆಫೀಸ್​ನಲ್ಲಿ ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಿರಲಿಲ್ಲ. ಆದರೆ ಅತ್ಯುತ್ತಮ ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಿತ್ತು.

‘ಇಯರ್​ಕೈ’ ಬಳಿಕ ಕಾಲಿವುಡ್​ನಲ್ಲಿ ಜನನಾಥನ್​ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಮಾಡಿದ್ದು ಬೆರಳೆಣಿಕೆಯ ಸಿನಿಮಾಗಳಾದರೂ ಅಪಾರ ಮನ್ನಣೆ ಗಳಿಸಿದ್ದರು. ನಿಧನರಾಗುವುದಕ್ಕೂ ಮುನ್ನ ಅವರು ‘ಲಾಭಂ’ ಸಿನಿಮಾ ನಿರ್ದೇಶಿಸುತ್ತಿದ್ದರು. ಆ ಚಿತ್ರಕ್ಕೆ ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ನಾಯಕಿ. ಜನನಾಥನ್​ ನಿಧನಕ್ಕೆ ಟ್ವಿಟರ್​ ಮೂಲಕ ಶ್ರುತಿ ಅವರು ಸಂತಾಪ ಸೂಚಿಸಿದ್ದಾರೆ.

‘ಭಾರವಾದ ಹೃದಯದಿಂದ ನಿಮಗೆ ನಾವು ವಿದಾಯ ಹೇಳುತ್ತಿದ್ದೇವೆ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ನಿಮ್ಮನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ನಿಮ್ಮ ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ಶ್ರುತಿ ಹಾಸನ್​ ಟ್ವೀಟ್​ ಮಾಡಿದ್ದಾರೆ.

ಸಂಗೀತ ನಿರ್ದೇಶಕ ಡಿ. ಇಮ್ಮಾನ್​, ನಟ ಮೋಹನ್​ ರಾಜ ಮುಂತಾದವರು ಜನನಾಥನ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ವಿಜಯ್​ ಸೇತುಪತಿ, ಜಗಪತಿ ಬಾಬು, ಶ್ರುತಿ ಹಾಸನ್ ನಟನೆಯ ‘ಲಾಭಂ’ ಚಿತ್ರಕ್ಕೆ ಜನನಾಥನ್​ ನಿರ್ದೇಶನ ಮಾಡುತ್ತಿದ್ದರು. ಆ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿದ್ದವು. ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ರೂಪದರ್ಶಿಯ ನಿಗೂಢ ಸಾವು: ಮಾಡಲಿಂಗ್ ಆಸೆಯೇ ಆ ವಿದ್ಯಾರ್ಥಿನಿಯ ಬದುಕಿಗೆ ಮುಳುವಾಯಿತಾ?

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು