AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿನಾಡಿನಲ್ಲೊಬ್ರು ಅಪರೂಪದ ಶಿಕ್ಷಕ.. ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ!

ಬಳ್ಳಾರಿ: ಈಗ ಎಲ್ಲೆಡೆ ಕೊರೊನಾ ಹೆಮ್ಮಾರಿ ಭೀತಿ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಶಾಲಾ-ಕಾಲೇಜುಗಳನ್ನ ಆರಂಭಿಸಿಲ್ಲ. ಬದಲಿಗೆ ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಬೋಧನೆ ಶುರು ಮಾಡಿದ್ದಾರೆ. ಆ ಮೂಲಕ ಕರ್ಚಿಗನೂರು ಗ್ರಾಮಸ್ಥರ ವಿಶೇಷ ಗಮನ ಸೆಳೆದಿದ್ದಾರೆ. ಇಡೀ ರಾಜ್ಯವ್ಯಾಪಿ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ […]

ಗಣಿನಾಡಿನಲ್ಲೊಬ್ರು ಅಪರೂಪದ ಶಿಕ್ಷಕ.. ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 30, 2020 | 4:00 PM

Share

ಬಳ್ಳಾರಿ: ಈಗ ಎಲ್ಲೆಡೆ ಕೊರೊನಾ ಹೆಮ್ಮಾರಿ ಭೀತಿ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಶಾಲಾ-ಕಾಲೇಜುಗಳನ್ನ ಆರಂಭಿಸಿಲ್ಲ. ಬದಲಿಗೆ ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಬೋಧನೆ ಶುರು ಮಾಡಿದ್ದಾರೆ. ಆ ಮೂಲಕ ಕರ್ಚಿಗನೂರು ಗ್ರಾಮಸ್ಥರ ವಿಶೇಷ ಗಮನ ಸೆಳೆದಿದ್ದಾರೆ.

ಇಡೀ ರಾಜ್ಯವ್ಯಾಪಿ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಆ ಗ್ರಾಮದ ಪ್ರತಿ ವಿದ್ಯಾರ್ಥಿಯ ಮನೆಮನೆಗೆ ತೆರಳಿ ಪಾಠ ಮಾಡುವ ಮುಖೇನ ಮತ್ತೊಬ್ಬರಿಗೆ ಮಾದರಿಯಾಗಿದ್ದಾರೆ. ಈಗಾಗಲೇ ಬಹುತೇಕ ಎಲ್ಲ ವಿಭಾಗದ ಮೇಲೂ ಕೊವೀಡ್ -19 ಪರಿಣಾಮ ಬೀರುತ್ತಿದೆ. ಅದರಲ್ಲಿ ಅತೀ ಹೆಚ್ಚು ಸಮಸ್ಯೆ ಅನುಭವಿಸುತ್ತಿರೋದು ಮಾತ್ರ ಶಿಕ್ಷಣ ಕ್ಷೇತ್ರ ಮಾತ್ರ. ಕಳೆದ ಐದು ತಿಂಗಳಿಂದ ಶಾಲಾ -ಕಾಲೇಜುಗಳು ಬಂದ್ ಅಗಿರೋದರಿಂದ ಮಕ್ಕಳ ಶೈಕ್ಷಣಿಕ ಬದುಕು ಕುಂಠಿತಗೊಳ್ಳುವ ಆತಂಕ ಪೋಷಕರನ್ನು ಕಾಡುತ್ತಿದೆ.

ಕರ್ಚಿಗನೂರು ಸರ್ಕಾರಿ ಶಾಲೆಯಲ್ಲಿ ಸುಮಾರು 100 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು‌, ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಮಹಾಮಾರಿ ಕೊರೊನಾ ಎಫೆಕ್ಟ್ ನಿಂದಾಗಿ ಎಲ್ಲ ಶಾಲೆಗಳು ಬಂದ್ ಅಗಿರೋದರಿಂದ ಮಕ್ಕಳು ಬಿಂದಾಸ್ ಅಗಿ ಓಡಾಡಿಕೊಂಡಿದ್ದಾರೆ. ಇದನ್ನರಿತ ಮುಖ್ಯ ಶಿಕ್ಷಕ ರಾಘವೇಂದ್ರ ನೇತ್ರತ್ವದಲ್ಲಿ ಶಿಕ್ಷಕರು ಹಳ್ಳಿಗೆ ತೆರಳಿ ನಾಲ್ಕೈದು ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಬೋಧನೆ ಮಾಡುತ್ತಿದ್ದಾರೆ.

ಪಾಠ ಹೇಳುವುದಷ್ಟೆ ಅಲ್ಲ. ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕೂ ಮುಂಚೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಅಲ್ಲದೆ ಮಾಸ್ಕ್ ಧರಿಸಿಕೊಂಡ್ರೆ ಮಾತ್ರ ಪಾಠ ಹೇಳಿ ಕೋಡೋದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುತ್ತಾರೆ. ಸಾಮಾಜಿಕ ಅಂತರ ಕಾಯ್ದುಕೊಂಡೇ ಪಾಠ ಬೋಧನೆ ಮಾಡುತ್ತಾರೆ. ಶಿಕ್ಷಕರ ಈ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ವಿದ್ಯಾರ್ಥಿಗಳಿಗೆ ಪಾಠದ ಜೊತೆ ಜೊತೆಗೆ ಮಹಾಮಾರಿ ಕೊರೊನಾ ಜಾಗ್ರತೆ ಮೂಡಿಸುವುದು ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯ ಬಾರದು ಎಂದು ಸ್ವ ಇಚ್ಚೆಯಿಂದ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಭೋಧನೆ ಮಾಡುವುದು. ಮರು ದಿನ ಪುನಾರಾರ್ವತನೆ ಮಕ್ಕಳಿಂದ ಮಾಡಿಸಲಾಗುತ್ತದೆ ಅಂತಾ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ ಹೇಳುತ್ತಾರೆ.

Published On - 7:06 pm, Tue, 28 July 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’