ಇಂಜುರಿ ಸಮಸ್ಯೆ: ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಿಂದ ರವೀಂದ್ರ ಜಡೇಜಾ ಔಟ್​..!

ಆಸ್ಟ್ರೇಲಿಯಾ ಪ್ರವಾಸದ ವೇಳೆ ಜಡೇಜಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಇಂಜುರಿಯಿಂದ ಚೇತರಿಸಿಕೊಳ್ಳಲು ಕನಿಷ್ಠ 6 ವಾರಗಳು ಬೇಕಾಗಬಹುದೆಂದು ಹೇಳಲಾಗಿದೆ.

  • TV9 Web Team
  • Published On - 16:44 PM, 21 Jan 2021
ಇಂಜುರಿ ಸಮಸ್ಯೆ: ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಿಂದ ರವೀಂದ್ರ ಜಡೇಜಾ ಔಟ್​..!
ರವೀಂದ್ರ ಜಡೇಜಾ

ಗಾಯದ ಸಮಸ್ಯೆಯಿಂದಾಗಿ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ವೇಳೆ ಜಡೇಜಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಇಂಜುರಿಯಿಂದ ಚೇತರಿಸಿಕೊಳ್ಳಲು ಕನಿಷ್ಠ 6 ವಾರಗಳು ಬೇಕಾಗಬಹುದೆಂದು ಹೇಳಲಾಗಿದೆ.

ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಭಾರತ 4 ಟೆಸ್ಟ್, 5 T 20 ಮತ್ತು 3 ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ. ಉಭಯ ತಂಡಗಳ ನಡುವಿನ ಮೊದಲ ಎರಡೂ ಟೆಸ್ಟ್‌ಗಳು ಚೆನ್ನೈನಲ್ಲಿಯೇ ನಡೆಯಲಿದ್ದು, ಉಳಿದ ಎರಡು ಪಂದ್ಯಗಳು ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿವೆ.

T 20- ಏಕದಿನ ಸರಣಿಯನ್ನು ಆಡುವ ನಿರೀಕ್ಷೆಯಿದೆ..
ರವೀಂದ್ರ ಜಡೇಜಾ ಅವರ ಟೆಸ್ಟ್ ತಂಡದಿಂದ ಹೊರಗುಳಿದಿದ್ದಾರೆ. ಆದರೆ, ಅವರು ಟಿ20 ಮತ್ತು ಏಕದಿನ ಸರಣಿಯಲ್ಲಿ ಆಡುವ ನಿರೀಕ್ಷೆಯಿದೆ. ಜಡೇಜಾ ಅವರನ್ನು ಟಿ20 ಮತ್ತು ಏಕದಿನ ಸರಣಿಯಲ್ಲಿ ಆಡಿಸುವ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ರವೀಂದ್ರ ಜಡೇಜಾ ಈಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹೋಗಿ ಅಭ್ಯಾಸ ನೆಡೆಸಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗಾಗಿ ಭಾರತ ತಂಡ ಜನವರಿ 27 ರಂದು ಚೆನ್ನೈ ತಲುಪಲಿದೆ.

ಆಸ್ಟ್ರೇಲಿಯಾ ಮಾತ್ರವಲ್ಲ ಇಂಗ್ಲೆಂಡ್​ ಟೆಸ್ಟ್​​ನಿಂದಲೂ ಹೊರಗುಳಿಯಲಿದ್ದಾರೆ ರವೀಂದ್ರ ಜಡೇಜಾ