ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಶಾಲಾ ಆವರಣದಲ್ಲೇ ಪಿಯು ಹಾಗೂ ಪದವಿ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ವಿಡಿಯೋವನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ಪೋಷಕರು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.