ಚಿಕ್ಕಬಳ್ಳಾಪುರ: ಸ್ಕೂಟಿಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಲಾಯಿಸುತ್ತಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ನಡೆದಿದೆ. ಮೃತ ಯುವತಿ ಬಂಡಹಳ್ಳಿ ನಿವಾಸಿ ವರ್ಷಾ(19) ಎಂದು ತಿಳಿದುಬಂದಿದೆ. ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಟಿಪ್ಪರ್ ವರ್ಷಾಳ ಮೇಲೆ ಹರಿದು ಹೋಗಿದೆ. ಹೀಗಾಗಿ, ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಇನ್ನು ಅಪಘಾತ ಸಂಭಿವಿಸಿದ ಕೂಡಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow us on
ಚಿಕ್ಕಬಳ್ಳಾಪುರ: ಸ್ಕೂಟಿಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಲಾಯಿಸುತ್ತಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ನಡೆದಿದೆ. ಮೃತ ಯುವತಿ ಬಂಡಹಳ್ಳಿ ನಿವಾಸಿ ವರ್ಷಾ(19) ಎಂದು ತಿಳಿದುಬಂದಿದೆ.
ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಟಿಪ್ಪರ್ ವರ್ಷಾಳ ಮೇಲೆ ಹರಿದು ಹೋಗಿದೆ. ಹೀಗಾಗಿ, ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಇನ್ನು ಅಪಘಾತ ಸಂಭಿವಿಸಿದ ಕೂಡಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.