
ಕೋಲಾರ: ದೇವಾಲಯದ ಬೀಗ ಮುರಿದ ಖದೀಮರು ನಗ ನಾಣ್ಯ ದೋಚಿರುವ ಘಟನೆ ಜಿಲ್ಲೆಯ ಕೆಂಬೋಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನವಾಗಿದ್ದು ಕಳ್ಳರು ಹುಂಡಿ ಹಣ ಹಾಗೂ ದೇವರ ಚಿನ್ನ ಬೆಳ್ಳಿಯ ಆಭರಣಗಳನ್ನ ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.