AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ

Dog Attack ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ
ನಾಯಿ ದಾಳಿಗೆ ಒಳಗಾದ ವ್ಯಕ್ತಿ (ಎಡ) ದಾಳಿ ಮಾಡಿದ ನಾಯಿ (ಬಲ)
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 04, 2021 | 12:05 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ. ಕೋರಮಂಗಲದ 4ನೇ ಬ್ಲಾಕ್​ನಲ್ಲಿ ಬಂದೇ ಬಂದು ನಾಯಿ ಸುಮಾರು 10 ಜನರಿಗೆ ಕಚ್ಚಿದೆ. ಇದರಿಂದ ಏರಿಯಾ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳನ್ನು ಮನೆಯಿಂದ ಆಚೆ ಆಟವಾಡಲೂ ಸಹ ಬಿಡದಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಬಂದೇ ನಾಯಿ 10 ಜನರಿಗೆ ಕಚ್ಚಿರುವುದರಿಂದ ಆ ನಾಯಿಗೆ ಹುಚ್ಚು ಇದೆಯಾ ಎಂಬ ಅನುಮಾನ ಸಹ ಉಂಟಾಗುತ್ತಿದೆ.

ಸದ್ಯ ನಾಯಿ ದಾಳಿಗೆ ಒಳಗಾದವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಕೋರಮಂಗಲದ ಜನ ಆತಂಕದಲ್ಲೇ BBMPಗೆ ಕರೆ ಮಾಡಿ ವಿಷಯ ತಿಳಿಸಿದ್ದು ಸಮಸ್ಯೆ ಬಗೆ ಹರಿದಿದೆ. ಆದ್ರೆ ನಾಯಿ ಜನರನ್ನು ಕಚ್ಚುವ ಮುನ್ನವೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿದ್ದಾರೆ ನಾಯಿ ದಾಳಿ ತಪ್ಪುತ್ತಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಹಾಗೂ ಅವುಗಳಿಗೆ ಆಗಾಗ ಆರೋಗ್ಯ ಪರೀಕ್ಷೆ ಮಾಡುವ ಕಾರ್ಯವನ್ನು ಬಿಬಿಎಂಪಿ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!