ಜಾತ್ರೆ ಮುಗಿಸಿ ವಾಪಸ್ ತೆರಳ್ತಿದ್ದ ಟ್ರಾಕ್ಟರ್ ಪಲ್ಟಿ.. 10 ಮಂದಿಗೆ ಗಂಭೀರ ಗಾಯ
Accident ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಗೆ ಟ್ರ್ಯಾಕ್ಟರ್ ಉರುಳಿಬಿದ್ದಿದೆ. ಈ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ರಾಯಚೂರು: ಟ್ರ್ಯಾಕ್ಟರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿಯ ಸಿಂಧನೂರು-ಗಂಗಾವತಿ ಹೆದ್ದಾರಿಯಲ್ಲಿ ನಡೆದಿದೆ. ಸದ್ಯ ಗಾಯಾಳು ಮಹಿಳೆ ಮತ್ತು ಮಕ್ಕಳನ್ನ ಸಿಂಧನೂರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಬಾಮಠದ ಜಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕುರಗೋಡ ಗ್ರಾಮದ ನಿವಾಸಿಗಳು ಅಂಬಾಮಠದ ಜಾತ್ರೆ ಮುಗಿಸಿಕೊಂಡು ಟ್ರಾಕ್ಟರ್ನಲ್ಲಿ ಸೋಮಲಾಪುರದಿಂದ ಕುರಗೋಡು ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಗೆ ಟ್ರ್ಯಾಕ್ಟರ್ ಉರುಳಿಬಿದ್ದಿದೆ. ಈ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದಾಗ.. ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ನಡುವೆ ಅಪಘಾತ
Published On - 8:55 am, Sat, 6 February 21