ಜಾತ್ರೆ ಮುಗಿಸಿ ವಾಪಸ್ ತೆರಳ್ತಿದ್ದ ಟ್ರಾಕ್ಟರ್ ಪಲ್ಟಿ.. 10 ಮಂದಿಗೆ ಗಂಭೀರ ಗಾಯ

Accident ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಗೆ ಟ್ರ್ಯಾಕ್ಟರ್ ಉರುಳಿಬಿದ್ದಿದೆ. ಈ ಪರಿಣಾಮ ಟ್ರ್ಯಾಕ್ಟರ್​ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಜಾತ್ರೆ ಮುಗಿಸಿ ವಾಪಸ್ ತೆರಳ್ತಿದ್ದ ಟ್ರಾಕ್ಟರ್ ಪಲ್ಟಿ.. 10 ಮಂದಿಗೆ ಗಂಭೀರ ಗಾಯ
ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಗೆ ಟ್ರ್ಯಾಕ್ಟರ್ ಉರುಳಿಬಿದ್ದಿದೆ
ಆಯೇಷಾ ಬಾನು

Updated on: Feb 06, 2021 | 8:56 AM

ರಾಯಚೂರು: ಟ್ರ್ಯಾಕ್ಟರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿಯ ಸಿಂಧನೂರು-ಗಂಗಾವತಿ ಹೆದ್ದಾರಿಯಲ್ಲಿ ನಡೆದಿದೆ. ಸದ್ಯ ಗಾಯಾಳು ಮಹಿಳೆ ಮತ್ತು ಮಕ್ಕಳನ್ನ ಸಿಂಧನೂರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಬಾಮಠದ ಜಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕುರಗೋಡ ಗ್ರಾಮದ ನಿವಾಸಿಗಳು ಅಂಬಾಮಠದ ಜಾತ್ರೆ ಮುಗಿಸಿಕೊಂಡು ಟ್ರಾಕ್ಟರ್​ನಲ್ಲಿ ಸೋಮಲಾಪುರದಿಂದ ಕುರಗೋಡು ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಗೆ ಟ್ರ್ಯಾಕ್ಟರ್ ಉರುಳಿಬಿದ್ದಿದೆ. ಈ ಪರಿಣಾಮ ಟ್ರ್ಯಾಕ್ಟರ್​ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದಾಗ.. ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ನಡುವೆ ಅಪಘಾತ

Published On - 8:55 am, Sat, 6 February 21

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us