ಊರಲ್ಲಿದ್ದ ಮಗು ಕರೆತರಲು ಹೋಗುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿ

ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ದಂಪತಿಗಳಾದ ನರಸಿಂಹಮೂರ್ತಿ (40) ಮತ್ತು ಲತಾ(35) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು. ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ […]

ಊರಲ್ಲಿದ್ದ ಮಗು ಕರೆತರಲು ಹೋಗುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿ
Follow us
ಸಾಧು ಶ್ರೀನಾಥ್​
|

Updated on: Aug 18, 2020 | 11:11 AM

ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ದಂಪತಿಗಳಾದ ನರಸಿಂಹಮೂರ್ತಿ (40) ಮತ್ತು ಲತಾ(35) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು.

ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ ಮಗುವನ್ನು ಮನೆಗೆ ವಾಪಸ್ ಕರೆತರಲು ಬೈಕಿನಲ್ಲಿ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 4ರ ಬೂದಿಹಾಳದ ಬಳಿ ದಂಪತಿ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದಂಪತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನೆಲಮಂಗಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ಕಂಟೇನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು