ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ
ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ ಮಗುವನ್ನು ಮನೆಗೆ ವಾಪಸ್ ಕರೆತರಲು ಬೈಕಿನಲ್ಲಿ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 4ರ ಬೂದಿಹಾಳದ ಬಳಿ ದಂಪತಿ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದಂಪತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ನೆಲಮಂಗಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ಕಂಟೇನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.