ಕೋವಿಡ್ ಸೆಂಟರ್ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ
ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು […]
ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.
ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು ಅವಕಾಶ ನೀಡಲಾಗಿದ್ದು, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಹೆಚ್ಚು ಒಲವು ತೋರುತ್ತಿದ್ದಾರೆ. ಇದರಿಂದಾಗಿ ಕೋವಿಡ್ ಕೇರ್ ಸೆಂಟರ್ಗಳು ಖಾಲಿ ಹೊಡೆಯುತ್ತಿವೆ.
ಈಗಾಗಲೇ BIECಯ ಐದು ಹಾಲ್ಗಳಲ್ಲಿ 10,000 ಬೆಡ್ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಲಾಗಿದ್ದು, ಸದ್ಯ BIECಯಲ್ಲಿ 6,000 ಬೆಡ್ಗಳು ಸಂಪೂರ್ಣ ಸಿದ್ಧವಾಗಿವೆ. ಅದರಲ್ಲಿ 1,500 ಬೆಡ್ಗಳನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ.
ಒಟ್ಟು 12 ಕೋವಿಡ್ ಕೇರ್ ಸೆಂಟರ್ಗಳಲ್ಲಿ 4,576 ಬೆಡ್ಗಳಿದ್ದು, ಅದರಲ್ಲಿ 2,966 ಬೆಡ್ಗಳು ಭರ್ತಿಯಾಗಿವೆ. ಭರ್ತಿಯಾಗಿರುವ ಬೆಡ್ಗಳಲ್ಲು ಸಹ 1,610 ಬೆಡ್ಗಳ ರೋಗಿಗಳು ಗುಣಮುಖರಾಗಿ ಮನೆಗೆ ವಾಪಸಾಗಿದ್ದಾರೆ. ಪ್ರತಿನಿತ್ಯ ಪತ್ತೆಯಾಗುವ ಸೋಂಕಿತರ ಪೈಕಿ ಶೇಕಡ 70ರಷ್ಟು ಜನ, ರೋಗಲಕ್ಷಣ ಇಲ್ಲದವರಾಗಿದ್ದಾರೆ. ಅವರಲ್ಲಿ ಶೇಕಡ 40-50 ರಷ್ಟು ಜನ, ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದಿಂದ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ಗಳ ಬೆಡ್ಗಳು ಉಪಯೋಗಕ್ಕೆ ಬಾರದಂತಾಗಿವೆ.
Published On - 10:42 am, Tue, 18 August 20