ಪಂದ್ಯ ವೀಕ್ಷಿಸುತ್ತಿದ್ದಾಗಲೇ ಕುಸಿದು ಬಿದ್ದ ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್.. ಆಸ್ಪತ್ರೆಗೆ ದಾಖಲು

15 ವರ್ಷಗಳ ವೃತ್ತಿಜೀವನದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು 16 ಬಾರಿ ಪಡೆದಿದ್ದಾರೆ. ಜೊತೆಗೆ ಕೇವಲ ಒಂದು ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಪರ ಆಡಿದ್ದಾರೆ.

ಪಂದ್ಯ ವೀಕ್ಷಿಸುತ್ತಿದ್ದಾಗಲೇ ಕುಸಿದು ಬಿದ್ದ ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್.. ಆಸ್ಪತ್ರೆಗೆ ದಾಖಲು
ಮಾಜಿ ಕ್ರಿಕೆಟಿಗ ಬಿ.ಎಸ್.ಚಂದ್ರಶೇಖರ್
Follow us
ಪೃಥ್ವಿಶಂಕರ
|

Updated on:Jan 18, 2021 | 12:56 PM

ಬೆಂಗಳೂರು: ಭಾರತ ಕ್ರಿಕೆಟ್​ ತಂಡದ ಮಾಜಿ ಲೆಗ್ ಸ್ಪಿನ್ನರ್ ಬಿ.ಎಸ್.ಚಂದ್ರಶೇಖರ್ ಅವರು ಈಗಾಗಲೇ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸರಿಯಾಗಿ ಮಾತನಾಡಲು ಸಹ ಅವರಿಗೆ ಸಾಧ್ಯವಾಗಲಿಲ್ಲ.. 75 ವರ್ಷದ ಚಂದ್ರಶೇಖರ್ ಈಗಾಗಲೇ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಇಂದು ಪಂದ್ಯ ವೀಕ್ಷಿಸುತ್ತಿದ ಸಮಯದಲ್ಲಿ ವಯೋಸಹಜ ಕಾಯಿಲೆಯಿಂದ ಕುಸಿದು ಬಿದ್ದಿದ್ದಾರೆ. ಪ್ರಸ್ತುತ ಚಂದ್ರಶೇಖರ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ವಿನಯ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬಿ.ಎಸ್.ಚಂದ್ರಶೇಖರ್ ಪಂದ್ಯವನ್ನು ವೀಕ್ಷಿಸುತ್ತಿದ ಸಮಯದಲ್ಲಿ ಇದ್ದಕ್ಕಿದ್ದಂತೆ ಸುಸ್ತಾದವರಂತೆ ಕಂಡರು ಮತ್ತು ಸರಿಯಾಗಿ ಮಾತನಾಡಲು ಸಹ ಅವರಿಗೆ ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದರು. ಬಿಎಸ್ ಚಂದ್ರಶೇಖರ್ ಅವರು ಈಗ ಚೆನ್ನಾಗಿಯೇ ಇದ್ದಾರೆ ಮತ್ತು ಎರಡು ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ಎಂದು ಬಿಎಸ್ ಚಂದ್ರಶೇಖರ್ ಅವರ ಪತ್ನಿ ಮಾಹಿತಿ ನೀಡಿದ್ದಾರೆ.

ಭಾರತೀಯ ಕ್ರಿಕೆಟ್‌ನಲ್ಲಿ ಬಿಎಸ್ ಚಂದ್ರಶೇಖರ್ ಹೆಜ್ಜೆ ಗುರುತು.. 1964 ರಲ್ಲಿ ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚಂದ್ರಶೇಖರ್ ಅಂತಾರಾಷ್ಟ್ರೀಯ ಕ್ರಿಕೆಟ್​ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಜೊತೆಗೆ 1979 ರಲ್ಲಿ ಅದೇ ಇಂಗ್ಲೆಂಡ್ ತಂಡದ ವಿರುದ್ಧ ಕೊನೆಯ ಟೆಸ್ಟ್ ಆಡುವುದರೊಂದಿಗೆ ತಮ್ಮ ಕ್ರಿಕೆಟ್​ ಜೀವನಕ್ಕೆ ವಿದಾಯ ತಿಳಿಸಿದ್ದು ವಿಶೇಷವಾಗಿತ್ತು. ಭಾರತದ ಈ ಸ್ಪಿನ್ ಲೆಜೆಂಡ್​ 58 ಪಂದ್ಯಗಳಲ್ಲಿ 242 ವಿಕೆಟ್ ಪಡೆದು ಮಿಂಚಿದ್ದಾರೆ.

15 ವರ್ಷಗಳ ವೃತ್ತಿಜೀವನದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು 16 ಬಾರಿ ಪಡೆದಿದ್ದಾರೆ. ಜೊತೆಗೆ ಕೇವಲ ಒಂದು ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಪರ ಆಡಿದ್ದಾರೆ. ಆಡಿದ ಒಂದೇ ಒಂದು ಏಕದಿನ ಪಂದ್ಯದಲ್ಲಿ ಅವರು ಮೂರು ವಿಕೆಟ್​ಗಳನ್ನು ಪಡೆದು ಮಿಂಚಿದ್ದರು. ಚಂದ್ರಶೇಖರ್ ಅವರ ಹೆಸರು ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲು ಪ್ರಮುಖ ಕಾರಣವೆಂದರೆ, ಅವರು ಬ್ಯಾಟ್​ನಿಂದ ಸಿಡಿಸಿದ ರನ್​ಗಳಿಗಿಂತ, ಹೆಚ್ಚು ವಿಕೆಟ್ ಪಡೆದ ವಿಶ್ವದ ಇಬ್ಬರು ಟೆಸ್ಟ್ ಆಟಗಾರರಲ್ಲಿ ಚಂದ್ರಶೇಖರ್ ಒಬ್ಬರು. 58 ಟೆಸ್ಟ್ ಪಂದ್ಯಗಳನ್ನಾಡಿರುವ ಚಂದ್ರಶೇಖರ್ 80 ಇನ್ನಿಂಗ್ಸ್‌ಗಳಲ್ಲಿ 167 ರನ್ ಗಳಿಸಿದ್ದರೆ, 242 ವಿಕೆಟ್ ಪಡೆದು ಮಿಂಚಿದ್ದಾರೆ.

Published On - 12:30 pm, Mon, 18 January 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?