ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಧಿಕಾರಲ್ಲಿದೆ, ಜ್ಞಾನೇಂದ್ರ ಕೂಡಲೇ ರಾಜೀನಾಮೆ ಸಲ್ಲಿಸಬೇಕು: ಸಿದ್ದರಾಮಯ್ಯ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 30, 2022 | 8:57 PM

ವ್ಯಾಪಕವಾಗಿ ಹರಡಿರುವ ಮತ್ತು ಎಲ್ಲ ಇಲಾಖೆಗಳಲ್ಲಿ ಹಾಸುಹೊಕ್ಕಿರುವ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಣೆಗಾರರು, ಅವರು ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಆರಗ ಜ್ಞಾನೇಂದ್ರ (Araga Jnanendra) ಅವರು ಗೃಹ ಸಚಿವನಾಗಿ ಮುಂದುವರಿಯಲು ನಾಲಾಯಕ್ಕು ಇದೇ ಕ್ಷಣ ಅವರು ರಾಜೀನಾಮೆ ನೀಡಿ ಸಂಪುಟದಿಂದ ಹೊರಬರಬೇಕು, ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಶನಿವಾರ ಬೆಂಗಳೂರಲ್ಲಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯನವರು ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರಕಾರ (corrupt government) ಅಧಿಕಾರದಲ್ಲಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಇಂಜಿನೀಯರ್, ಪಿಎಸ್ ಐ-ಎಲ್ಲ ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಬಿಜೆಪಿ ಸರ್ಕಾರ ದಕ್ಷ ಆಡಳಿತ ನಡೆಸಿದ್ದರೆ ಇದೆಲ್ಲ ಆಗುತಿತ್ತೇ? ಎಂದು ಸಿದ್ದರಾಮಯ್ಯ ಕೇಳಿದರು.

ರಾಜ್ಯ ಸರ್ಕಾರ ದುರಾಡಳಿತದ ಕೊಂಪೆಯಾಗಿದೆ. ದುರಾಡಳಿತ ಮತ್ತು ಭ್ರಷ್ಟಾಚಾರ ಪರಸ್ಪರ ಕಾಂಪ್ಲಿಮೆಂಟ್ ಮಾಡುತ್ತಿರುತ್ತವೆ. ದುರಾಡಳಿತ ಇದ್ದಲ್ಲಿ ಭ್ರಷ್ಟಾಚಾರ ಇರುತ್ತದೆ ಮತ್ತು ಭ್ರಷ್ಟಾಚಾರ ಇರುವಲ್ಲಿ ದುರಾಡಳಿತ ಎಂದು ಸಿದ್ದರಾಮಯ್ಯ ಹೇಳಿದರು.

ವ್ಯಾಪಕವಾಗಿ ಹರಡಿರುವ ಮತ್ತು ಎಲ್ಲ ಇಲಾಖೆಗಳಲ್ಲಿ ಹಾಸುಹೊಕ್ಕಿರುವ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಣೆಗಾರರು, ಅವರು ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅರ್ಹರೇ ಅಲ್ಲ, ಅವು ಕೂಡಲೇ ರಾಜೀನಾಮೆ ನೀಡಬೇಕು ಅಂತ ವಿರೋಧ ಪಕ್ಷದ ನಾಯಕ ಹೇಳಿದರು.

ಸಿದ್ದಾರಾಮಯ್ಯ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರ ಮಗ ಡಾ ಯತೀಂದ್ರ ಸಿದ್ದರಾಮಯ್ಯ ಮತ್ತು ಅವರ ಆಪ್ತ ಸ್ನೇಹಿತ ಮತ್ತು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಜೊತೆಗಿದ್ದರು.

ಇದನ್ನೂ ಓದಿ:   ಪಕ್ಷಗಳು ಚುನಾವಣಾ ತಯಾರಿ ಮಾಡಿಕೊಳ್ಳುವಾಗಲೇ ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ಓಡಾಡುತ್ತಿದ್ದಾರೆ!