
ಕೋಲಾರ:ಬಾವಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದ ಬಳಿ ನೆಡೆದಿದೆ.
ತಮಿಳುನಾಡು ಮೂಲದ ಅಜಿತ್ (23) ಮೃತ ಯುವಕ. ಈತ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಕಾಮಗಾರಿಗೆ ತಮಿಳುನಾಡಿನಿಂದ ಆಗಮಿಸಿದ್ದ. ಸ್ನೇಹಿತರೊಂದಿಗೆ ಗ್ರಾಮದ ಹೊರವಲಯದಲ್ಲಿದ್ದ ಬಾವಿಯಲ್ಲಿ ಈಜಲು ಹೋಗಿದ್ದ ಅಜಿತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.