ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ಕದ್ದಿದ್ದು ಏನು ಗೊತ್ತಾ?
ಬೆಂಗಳೂರು: ದೇವಾಲಯದ ಬೀಗ ಒಡೆದು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕನ್ನೋಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯಕ್ಕೆ ಕನ್ನ ಹಾಕಿರುವ ದುರುಳರು, ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣ ಹಾಗೂ ದೇವಾಲಯದ ಧ್ವನಿವರ್ಧಕಗಳನ್ನು ಕಳವು ಮಾಡಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆದ್ರೆ ಕಳವಿನ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರೂ, ಇನ್ನು ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೆಂಗಳೂರು: ದೇವಾಲಯದ ಬೀಗ ಒಡೆದು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕನ್ನೋಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯಕ್ಕೆ ಕನ್ನ ಹಾಕಿರುವ ದುರುಳರು, ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣ ಹಾಗೂ ದೇವಾಲಯದ ಧ್ವನಿವರ್ಧಕಗಳನ್ನು ಕಳವು ಮಾಡಿದ್ದಾರೆ.
ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆದ್ರೆ ಕಳವಿನ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರೂ, ಇನ್ನು ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.



