ಪಶ್ಚಿಮ ಬಂಗಾಳ: ಧೂಪ್ಗುರಿ ನಗರದಲ್ಲಿ ಭೀಕರ ಅಪಘಾತ.. 13 ಮಂದಿ ಸಾವು

ಜಲ್ಪೈಗುರಿ ಜಿಲ್ಲೆಯ ಧೂಪ್ಗುರಿ ನಗರದಲ್ಲಿ ನಿನ್ನೆ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದ್ದು ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ.

  • TV9 Web Team
  • Published On - 8:00 AM, 20 Jan 2021
ಪಶ್ಚಿಮ ಬಂಗಾಳ: ಧೂಪ್ಗುರಿ ನಗರದಲ್ಲಿ ಭೀಕರ ಅಪಘಾತ.. 13 ಮಂದಿ ಸಾವು
ಧೂಪ್ಗುರಿ ನಗರದಲ್ಲಿ ನಿನ್ನೆ ರಾತ್ರಿ ನಡೆದ ಭೀಕರ ಅಪಘಾತ

ಪಶ್ಚಿಮ ಬಂಗಾಳ: ಜಲ್ಪೈಗುರಿ ಜಿಲ್ಲೆಯ ಧೂಪ್ಗುರಿ ನಗರದಲ್ಲಿ ನಿನ್ನೆ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದ್ದು ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ದಟ್ಟ ಮಂಜು ಆವರಿಸಿದ್ದರಿಂದ ಗೋಚರತೆ ಕಡಿಮೆಯಾಗಿ ಚಾಲಕನಿಗೆ ರಸ್ತೆ ಕಾಣಿಸದೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪಿಎಂ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ
ಅಪಘಾತದಲ್ಲಿ ಮೃತಪಟ್ಟವರಿಗೆ ಪಿಎಂ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ.