AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಇಲಾಖೆ ಎಡವಟ್ಟು: ಕುರಿ ಮೇಯಿಸಲು ಹೋದವರು ಪಕ್ಕದ ಕಾಲುವೆಯಲ್ಲಿ ಮುಳುಗಿ ಸತ್ತೇ ಹೋದ್ರು..

ಕೋಲಾರ: ಬಾಳಿ ಬದುಕಬೇಕಿದ್ದ ಮೂವರು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋದವರು ಬಾರದ ಲೋಕಕ್ಕೆ ಹೋಗಿದ್ದರಿಂದ ಹೆತ್ತವರು ದಿಕ್ಕೇ ತೋಚದಂತಾಗಿದ್ದಾರೆ. ರೈಲ್ವೆ ಇಲಾಖೆಯವರು ಮಾಡಿರೋ ಅವೈಜ್ಞಾನಿಕ ಕಾಲುವೆ ಇದಕ್ಕೆಲ್ಲ ಕಾರಣವಾಗಿದೆ. ಮೊನ್ನೆ ಕೋಲಾರ ಜಿಲ್ಲೆ ಬಂಗಾರಪೇಟೆ ಸುತ್ತಮುತ್ತ ಭರ್ಜರಿ ಮಳೆ ಸುರಿದಿತ್ತು. ಪರಿಣಾಮ ಕುಂಬಾರಪಾಳ್ಯದ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ತುಂಬಿತ್ತು. ಈ ವೇಳೆ ತಮ್ಮ ಮನೆಯಲ್ಲಿದ್ದ ಕುರಿಗಳನ್ನ ಮೇಯಿಸುತ್ತಾ ಅಲ್ಲೇ ಆಟವಾಡಿಕೊಂಡಿದ್ದ ಮಕ್ಕಳು ನೀರಿಗೆ ಇಳಿದಿದ್ದಾರೆ. ನೀರಿನ ಆಳ ತಿಳಿಯದೆ ಇಳಿದ ಮೂರು ಜನ ಮಕ್ಕಳು […]

ರೈಲ್ವೆ ಇಲಾಖೆ ಎಡವಟ್ಟು: ಕುರಿ ಮೇಯಿಸಲು ಹೋದವರು ಪಕ್ಕದ ಕಾಲುವೆಯಲ್ಲಿ ಮುಳುಗಿ ಸತ್ತೇ ಹೋದ್ರು..
ಆಯೇಷಾ ಬಾನು
ಆಯೇಷಾ ಬಾನು|

Updated on:Oct 11, 2020 | 8:27 AM

Share

ಕೋಲಾರ: ಬಾಳಿ ಬದುಕಬೇಕಿದ್ದ ಮೂವರು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋದವರು ಬಾರದ ಲೋಕಕ್ಕೆ ಹೋಗಿದ್ದರಿಂದ ಹೆತ್ತವರು ದಿಕ್ಕೇ ತೋಚದಂತಾಗಿದ್ದಾರೆ. ರೈಲ್ವೆ ಇಲಾಖೆಯವರು ಮಾಡಿರೋ ಅವೈಜ್ಞಾನಿಕ ಕಾಲುವೆ ಇದಕ್ಕೆಲ್ಲ ಕಾರಣವಾಗಿದೆ.

ಮೊನ್ನೆ ಕೋಲಾರ ಜಿಲ್ಲೆ ಬಂಗಾರಪೇಟೆ ಸುತ್ತಮುತ್ತ ಭರ್ಜರಿ ಮಳೆ ಸುರಿದಿತ್ತು. ಪರಿಣಾಮ ಕುಂಬಾರಪಾಳ್ಯದ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ತುಂಬಿತ್ತು. ಈ ವೇಳೆ ತಮ್ಮ ಮನೆಯಲ್ಲಿದ್ದ ಕುರಿಗಳನ್ನ ಮೇಯಿಸುತ್ತಾ ಅಲ್ಲೇ ಆಟವಾಡಿಕೊಂಡಿದ್ದ ಮಕ್ಕಳು ನೀರಿಗೆ ಇಳಿದಿದ್ದಾರೆ. ನೀರಿನ ಆಳ ತಿಳಿಯದೆ ಇಳಿದ ಮೂರು ಜನ ಮಕ್ಕಳು ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಎಷ್ಟು ಹೊತ್ತಾದ್ರು ಮನೆಗೆ ಬಾರದ ಮಕ್ಕಳನ್ನು ಹುಡುಕಾಡಿದಾಗ, ತಂದೆ ಅಮ್ಜದ್​ಗೆ ಮಕ್ಕಳ ಶವ ಸಿಕ್ಕಿದೆ. ಮೃತರನ್ನ 8 ವರ್ಷದ ಬಾಲಕಿ ರುಕ್ಸರ್, 10 ವರ್ಷದ ಸಾಧಿಕ್ ಹಾಗೂ 7 ವರ್ಷದ ಫಯಾಜ್ ಅಂತಾ ಗುರುತಿಸಲಾಗಿದೆ.

ಈ ಮೂರು ಮಕ್ಕಳ ಸಾವಿಗೆ ರೈಲ್ವೆ ಇಲಾಖೆ ಕಾರಣ ಅಂತಾ ಸ್ಥಳೀಯರು ಆರೋಪಿಸಿದ್ದಾರೆ. ಅವೈಜ್ಞಾನಿಕ ರೈಲ್ವೆ ಅಂಡರ್​ಪಾಸ್ ಕಾಮಗಾರಿ ಮಕ್ಕಳ ಸಾವಿಗೆ ಕಾರಣ ಅಂತಿದ್ದಾರೆ. ಅಂಡರ್​ಪಾಸ್​ನಲ್ಲಿ ಪ್ರತಿಬಾರಿ ಮಳೆ ಬಂದಾಗ ನೀರು ತುಂಬಿಕೊಂಡು ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಅಂಡರ್​ ಪಾಸ್​ ಪಕ್ಕದಲ್ಲಿ ಕಾಲುವೆ ಮಾಡಿ ನೀರನ್ನು ಬಿಡಲಾಗಿತ್ತು. ಇದೇ ಮಕ್ಕಳ ಸಾವಿಗೆ ಕಾರಣ ಅಂತಾ ಸ್ಥಳೀಯರು ಆರೋಪಿಸಿದ್ದಾರೆ. ಅಲ್ದೆ, ಮಕ್ಕಳ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಅಂತಾ ಆಗ್ರಹಿಸಿದ್ದಾರೆ.

ಒಟ್ಟಾರೆ ಬಾಳಿ ಬದುಕಬೇಕಿದ್ದ ಮೂರು ಮಕ್ಕಳನ್ನು ಬಲಿ ಪಡೆದಿರು ಇದೇ ರೀತಿಯ ಅವೈಜ್ಞಾನಿಕ ರೈಲ್ವೆ ಅಂಡರ್​ಪಾಸ್​ಗಳು ಜಿಲ್ಲೆಯಲ್ಲಿ ಹತ್ತಾರಿವೆ. ಇಂತ ಅಮಾಯಕ ಜೀವಗಳನ್ನು ಬಲಿ ಪಡೆಯುವ ಮೊದಲು ಸಂಬಂಧ ಪಟ್ಟವರು ಅವೈಜ್ಞಾನಿಕ ಅಂಡರ್​ಪಾಸ್​ಗಳನ್ನ ಸರಿ ಪಡಿಸಬೇಕಿದೆ.

Published On - 8:27 am, Sun, 11 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!