ಕೊರೊನಾದಿಂದ ಬೀದರ್​ನಲ್ಲಿ ಮೂವರು ಮೃತಪಟ್ಟಿದ್ದಾರಾ? ಖಂಡ್ರೆ ಆರೋಪವೇನು?

|

Updated on: May 02, 2020 | 11:21 AM

ಬೀದರ್: ‌ಜಿಲ್ಲೆಯಲ್ಲಿ ಒಂದು ತಿಂಗಳ ‌ಅವಧಿಯಲ್ಲಿ ಕೊರೊನಾ ವೈರಸ್​ನಿಂದ ಮೂವರು ಸಾವಿಗೀಡಾಗಿದ್ದಾರೆ ಎಂದು ಭಾಲ್ಕಿಯಲ್ಲಿ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಕೊರೊನಾದಿಂದ ಮೂವರು ಮೃತಪಟ್ಟಿದ್ದಾರೆ. ಆದ್ರೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಇದನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿದ್ದಾರೆ. ಮಹಾಮಾರಿ ಕೊರೊನಾದಿಂದ ಸಾವಿನ ಸರಣಿ ಮುಂದುವರಿಯುತ್ತಿದೆ. ಆದ್ರೂ ಈ ಬಗ್ಗೆ ಬಹಿರಂಗ ಪಡಿಸಲು ಹಿಂದೇಟು. ಇದು ಜಿಲ್ಲೆಯ ಜನರಲ್ಲಿ ಆಂತಕ ಹೆಚ್ಚಿಸಿದ್ದು, ಸಾವು ಬಹಿರಂಗಪಡಿಸಿ ಎಂದು ಖಂಡ್ರೆ ಆಗ್ರಹಿಸಿದ್ದಾರೆ. ಅಲ್ಲದೆ ನಿನ್ನೆಯೂ […]

ಕೊರೊನಾದಿಂದ ಬೀದರ್​ನಲ್ಲಿ ಮೂವರು ಮೃತಪಟ್ಟಿದ್ದಾರಾ? ಖಂಡ್ರೆ ಆರೋಪವೇನು?
ಈಶ್ವರ್​ ಖಂಡ್ರೆ
Follow us on

ಬೀದರ್: ‌ಜಿಲ್ಲೆಯಲ್ಲಿ ಒಂದು ತಿಂಗಳ ‌ಅವಧಿಯಲ್ಲಿ ಕೊರೊನಾ ವೈರಸ್​ನಿಂದ ಮೂವರು ಸಾವಿಗೀಡಾಗಿದ್ದಾರೆ ಎಂದು ಭಾಲ್ಕಿಯಲ್ಲಿ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಕೊರೊನಾದಿಂದ ಮೂವರು ಮೃತಪಟ್ಟಿದ್ದಾರೆ. ಆದ್ರೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಇದನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿದ್ದಾರೆ.

ಮಹಾಮಾರಿ ಕೊರೊನಾದಿಂದ ಸಾವಿನ ಸರಣಿ ಮುಂದುವರಿಯುತ್ತಿದೆ. ಆದ್ರೂ ಈ ಬಗ್ಗೆ ಬಹಿರಂಗ ಪಡಿಸಲು ಹಿಂದೇಟು. ಇದು ಜಿಲ್ಲೆಯ ಜನರಲ್ಲಿ ಆಂತಕ ಹೆಚ್ಚಿಸಿದ್ದು, ಸಾವು ಬಹಿರಂಗಪಡಿಸಿ ಎಂದು ಖಂಡ್ರೆ ಆಗ್ರಹಿಸಿದ್ದಾರೆ. ಅಲ್ಲದೆ ನಿನ್ನೆಯೂ ಕೂಡಾ 85 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ಸಾವಿಗೀಡಾದವರ ಮಾಹಿತಿ ಮುಚ್ಚಿಡುವ ಅನಿವಾರ್ಯತೆ ಸರ್ಕಾರಕ್ಕೆ ಏನಿದೆ? ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.

ಸರ್ಕಾರದ ಮಾಹಿತಿಯಂತೆ ಬೀದರ್ ಜಿಲ್ಲೆಯಲ್ಲಿ ಈವರೆಗೆ 14 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಅದರಲ್ಲಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 6 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.