ಇಂದು ವೈದ್ಯಕೀಯ ಶಿಕ್ಷಣ ಸಚಿವರ ತವರಿನಲ್ಲೇ ಕೊರೊನಾ ಮರಣ ಮೃದಂಗ
ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯಲ್ಲೇ ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಕಿಲ್ಲರ್ ಕೊರೊನಾಗೆ ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಇಬ್ಬರು, ಚಿಂತಾಮಣಿ ನಗರದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ 58 ವರ್ಷದ ಉಪನ್ಯಾಸಕ, 50 ವರ್ಷದ ಪುರುಷ ಹಾಗೂ ಚಿಂತಾಮಣಿಯಲ್ಲಿ 50 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 6 ಜನ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯಲ್ಲೇ ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಕಿಲ್ಲರ್ ಕೊರೊನಾಗೆ ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಇಬ್ಬರು, ಚಿಂತಾಮಣಿ ನಗರದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ 58 ವರ್ಷದ ಉಪನ್ಯಾಸಕ, 50 ವರ್ಷದ ಪುರುಷ ಹಾಗೂ ಚಿಂತಾಮಣಿಯಲ್ಲಿ 50 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 6 ಜನ ಕೊನೆಯುಸಿರೆಳೆದಿದ್ದಾರೆ.