2 ಲಾರಿಗಳ ನಡುವೆ ಮುಖಾಮುಖಿ, ಸ್ಥಳದಲ್ಲೇ ಮೂವರ ಸಾವು

|

Updated on: Feb 16, 2020 | 12:28 PM

ವಿಜಯಪುರ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಕೊಲ್ಹಾರ ಪಟ್ಟಣದ ಗರಸಂಗಿ ಕ್ರಾಸ್​ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ವಿಜಯಪುರದಿಂದ ಹುಬ್ಬಳ್ಳಿಯತ್ತ ತೆರಳ್ತಿದ್ದ ಮತ್ತೊಂದು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ 2 ಲಾರಿಗಳಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಊರು ಹಾಗೂ ಹೆಸರುಗಳು ಇನ್ನು ತಿಳಿದು ಬಂದಿಲ್ಲ.

2 ಲಾರಿಗಳ ನಡುವೆ ಮುಖಾಮುಖಿ, ಸ್ಥಳದಲ್ಲೇ ಮೂವರ ಸಾವು
Follow us on

ವಿಜಯಪುರ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಕೊಲ್ಹಾರ ಪಟ್ಟಣದ ಗರಸಂಗಿ ಕ್ರಾಸ್​ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ವಿಜಯಪುರದಿಂದ ಹುಬ್ಬಳ್ಳಿಯತ್ತ ತೆರಳ್ತಿದ್ದ ಮತ್ತೊಂದು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ 2 ಲಾರಿಗಳಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಊರು ಹಾಗೂ ಹೆಸರುಗಳು ಇನ್ನು ತಿಳಿದು ಬಂದಿಲ್ಲ.