ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋದ ತಾಯಿ-ಮಕ್ಕಳು ವಾಪಸ್ ಬರಲೇ ಇಲ್ಲ, ಎಲ್ಲಿ?
ರಾಯಚೂರು: ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕೊಠ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾರ್ವತಿ(30), ಶಿಲ್ಪಾ(10) ಮತ್ತು ಅರ್ಜುನ (9) ನೀರುಪಾಲಾದ ದುರ್ದೈವಿಗಳು. ಪಾರ್ವತಿ ತನ್ನ ಮಕ್ಕಳೊಂದಿಗೆ ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ರಾಯಚೂರು: ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕೊಠ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾರ್ವತಿ(30), ಶಿಲ್ಪಾ(10) ಮತ್ತು ಅರ್ಜುನ (9) ನೀರುಪಾಲಾದ ದುರ್ದೈವಿಗಳು.
ಪಾರ್ವತಿ ತನ್ನ ಮಕ್ಕಳೊಂದಿಗೆ ಹಳ್ಳದಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
Published On - 11:35 am, Sun, 30 August 20




