ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ

ನೆಲಮಂಗಲ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದರ ಪರಿಣಾಮವಾಗಿ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿ ನೆಡೆದಿದೆ. ಹುಚ್ಚು ನಾಯಿ ದಾಳಿಯಲ್ಲಿ ಗುಂಡೇನಹಳ್ಳಿ ಕಿರಣ್ ಎಂಬುವವರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸಂಬಂಧ ಪಟ್ಟ ಇಲಾಖೆ ಸಿಬ್ಬಂದಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ
ಸಾಂಕೇತಿಕ ಚಿತ್ರ
Updated By: ಸಾಧು ಶ್ರೀನಾಥ್​

Updated on: Nov 17, 2020 | 2:55 PM

ನೆಲಮಂಗಲ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದರ ಪರಿಣಾಮವಾಗಿ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿ ನೆಡೆದಿದೆ.

ಹುಚ್ಚು ನಾಯಿ ದಾಳಿಯಲ್ಲಿ ಗುಂಡೇನಹಳ್ಳಿ ಕಿರಣ್ ಎಂಬುವವರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸಂಬಂಧ ಪಟ್ಟ ಇಲಾಖೆ ಸಿಬ್ಬಂದಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.