ವಿದ್ಯುತ್ ಕಂಬಕ್ಕೆ ಇಂಡಿಕಾ ಕಾರ್ ಡಿಕ್ಕಿ: ಮೂವರು ಸಾವು, ಮೂವರು ಪ್ರಾಣಾಪಾಯದಿಂದ ಪಾರು

ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರ್​ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಲಾವತಿ (65), ಲೋಹಿತ್(36) ಮತ್ತು ಶಶಾಂಕ್(10) ಎಂದು ಗುರುತಿಸಲಾಗಿದೆ. ಕಾರ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾಕ್​ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರು ಧರ್ಮಸ್ಥಳದಿಂದ ರಿಪ್ಪನ್​ಪೇಟೆಗೆ ವಾಪಸ್ ಬರುತ್ತಿದ್ದ ವೇಳೆ ಇಂದು ಬೆಳಗಿನ […]

ವಿದ್ಯುತ್ ಕಂಬಕ್ಕೆ ಇಂಡಿಕಾ ಕಾರ್ ಡಿಕ್ಕಿ: ಮೂವರು ಸಾವು, ಮೂವರು ಪ್ರಾಣಾಪಾಯದಿಂದ ಪಾರು
KUSHAL V

|

Sep 24, 2020 | 2:39 PM

ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರ್​ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಲಾವತಿ (65), ಲೋಹಿತ್(36) ಮತ್ತು ಶಶಾಂಕ್(10) ಎಂದು ಗುರುತಿಸಲಾಗಿದೆ. ಕಾರ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾಕ್​ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಯಾಣಿಕರು ಧರ್ಮಸ್ಥಳದಿಂದ ರಿಪ್ಪನ್​ಪೇಟೆಗೆ ವಾಪಸ್ ಬರುತ್ತಿದ್ದ ವೇಳೆ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. ರಿಪ್ಪನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada