ಪ್ರವಾಹದಲ್ಲಿ ಸಿಲುಕಿದ್ದ ಮೂವರು ಬಿಹಾರಿ ಕಾರ್ಮಿಕರ ರಕ್ಷಣೆ.. ಯಾವೂರಲ್ಲಿ?
ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ ರಕ್ಷಣೆ ಮಾಡಿದ್ದಾರೆ. ಇದೇ ರೀತಿ ಕೆಲ […]
ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ ರಕ್ಷಣೆ ಮಾಡಿದ್ದಾರೆ.
ಇದೇ ರೀತಿ ಕೆಲ ದಿನಗಳ ಹಿಂದೆ ರಾಯಚೂರಿನಲ್ಲಿ ಮಸ್ಕಿ ಜಲಾಶಯದ ಒಳ ಹರಿವು ಹೆಚ್ಚಳದಿಂದಾಗಿ ಮೂವರು ಪ್ರವಾಹಕ್ಕೆ ಸಿಲುಕಿದ್ದರು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದು, ಮತ್ತೋರ್ವ ವ್ಯಕ್ತಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ.
ಇದನ್ನೂ ಓದಿ: ಮಸ್ಕಿ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ