ಮಂಡ್ಯ: ಸಕ್ಕರೆ ನಾಡು ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಂಚೇಬೀರನಹಳ್ಳಿ ಸಮೀಪದ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಸದ್ಯ ಮರಿ ಚಿರತೆಗಳನ್ನು ರಕ್ಷಿಸಲಾಗಿದೆ.
ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಮಾಹಿತಿ ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಮರಿಗಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಚಿರತೆಗಳನ್ನು ಸೆರೆ ಹಿಡಿದು ಆತಂಕ ದೂರ ಮಾಡುವಂತೆ ಜನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.