
ರಾಯಚೂರು: ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು MBBS ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಅಭಿಷೇಕ್, ಗಣೇಶ್, ಬಸವರಾಜ್ ಮೃತ ದುರ್ದೈವಿಗಳು.
ರಾಯಚೂರಿನ ನವೋದಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಯರಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.