ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್ಐ ಸೇರಿ ಮೂವರು ಅರೆಸ್ಟ್
ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್ ಡೆತ್ ಕೇಸ್ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್ […]
ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.
ಇನ್ನು ಲಾಕಪ್ ಡೆತ್ ಕೇಸ್ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಾಯಕೊಂಡ ಪೊಲೀಸ್ ಠಾಣೆಯ ಪಿಎಸ್ಐ ಪ್ರಕಾಶ್, ಹೆಡ್ಕಾನ್ಸ್ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್ ಡೆತ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.
ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.
Published On - 7:10 am, Wed, 7 October 20